Saturday, 31 October 2026 — Suryagagana
04:44 AM
ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I
ಸೂರ್ಯಗಗನ

I ಅ. 23ರಿಂದ ಐಎಂಎ ರಾಜ್ಯ ಸಮ್ಮೇಳನ I ಡಾ. ಪಿ. ನಾರಾಯಣ I

I ಅ. 23ರಿಂದ ಐಎಂಎ ರಾಜ್ಯ ಸಮ್ಮೇಳನ I ಡಾ. ಪಿ. ನಾರಾಯಣ I ಶಿವಮೊಗ್ಗ: ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಜ್ಯ ಶಾಖೆಯ 92ನೇ ವಾರ್ಷಿಕ ಸಮ್ಮೇಳನ ‘ಮೆಡಿಕಾನ್‌–2026’ ಶೀರ್ಷಿಕೆಯಡಿ ಅ. 23ರಿಂದ 25ರವರೆಗೆ ನಗರದ ಸುಬ್ಬಯ್ಯ ವೈದ್ಯಕೀಯ ಸಂಸ್ಥೆಯಲ್ಲಿ…

I ಅ. 23ರಿಂದ ಐಎಂಎ ರಾಜ್ಯ ಸಮ್ಮೇಳನ I ಡಾ. ಪಿ. ನಾರಾಯಣ I

ಶಿವಮೊಗ್ಗ: ಭಾರತೀಯ ವೈದ್ಯಕೀಯ ಸಂಘದ (ಐಎಂಎ) ರಾಜ್ಯ ಶಾಖೆಯ 92ನೇ ವಾರ್ಷಿಕ ಸಮ್ಮೇಳನ ‘ಮೆಡಿಕಾನ್‌–2026’ ಶೀರ್ಷಿಕೆಯಡಿ ಅ. 23ರಿಂದ 25ರವರೆಗೆ ನಗರದ ಸುಬ್ಬಯ್ಯ ವೈದ್ಯಕೀಯ ಸಂಸ್ಥೆಯಲ್ಲಿ ನಡೆಯಲಿದೆ ಎಂದು ಐಎಂಎ ಜಿಲ್ಲಾ ಘಟಕದ ಹಿರಿಯ ಸದಸ್ಯ ಡಾ. ಪಿ. ನಾರಾಯಣ ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ಗುರುವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ಸುಮಾರು 2,500 ವೈದ್ಯರು ಭಾಗವಹಿಸುವ ನಿರೀಕ್ಷೆಯಿದೆ. ವೈದ್ಯಕೀಯ ಜ್ಞಾನವೃದ್ಧಿ, ನೈತಿಕ ವೈದ್ಯಕೀಯ ಪದ್ಧತಿ, ವೃತ್ತಿಪರ ಸಹಯೋಗ ಹಾಗೂ ಗುಣಮಟ್ಟದ ರೋಗಿಗಳ ಆರೈಕೆಗೆ ಸಮ್ಮೇಳನ ಒತ್ತು ನೀಡಲಿದೆ ಎಂದರು.

ಅ. 24ರಂದು ಸಂಜೆ 4.30ಕ್ಕೆ ನಡೆಯುವ ಉದ್ಘಾಟನಾ ಸಮಾರಂಭವನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಹಾಗೂ ವಕ್ಫ್ ಸಚಿವ ಯು.ಟಿ. ಖಾದರ್ ಉದ್ಘಾಟಿಸಲಿದ್ದಾರೆ. ಸುಬ್ಬಯ್ಯ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಎಸ್. ನಾಗೇಂದ್ರ ಹಾಗೂ ಸರ್ಜಿ ಶಿಕ್ಷಣ ಸಂಸ್ಥೆಗಳ ವ್ಯವಸ್ಥಾಪಕ ನಿರ್ದೇಶಕ ಡಾ. ಧನಂಜಯ ಸರ್ಜಿ ಭಾಗವಹಿಸಲಿದ್ದಾರೆ ಎಂದರು.

ಐಎಂಎ ರಾಜ್ಯ ಶಾಖೆಯ ನೂತನ ಅಧ್ಯಕ್ಷರಾಗಿ ಭದ್ರಾವತಿಯ ಮನೋವೈದ್ಯ ಡಾ. ಹರೀಶ್ ದೇಲಂತಬೆಟ್ಟು ಅಧಿಕಾರ ಸ್ವೀಕರಿಸಲಿದ್ದಾರೆ. ಹಾಲಿ ಅಧ್ಯಕ್ಷ ಡಾ. ಟಿ.ಎ. ವೀರಭದ್ರಯ್ಯ ಅವರು ಅಧಿಕಾರ ಹಸ್ತಾಂತರಿಸಲಿದ್ದಾರೆ ಎಂದು ತಿಳಿಸಿದರು.

ಅ. 23ರಂದು ಬೆಳಿಗ್ಗೆ 9ರಿಂದ ವೈದ್ಯರ ಕೌಶಲವರ್ಧನೆ ಹಾಗೂ ಪ್ರಾಯೋಗಿಕ ಜ್ಞಾನ ಹೆಚ್ಚಿಸುವ ಕಾರ್ಯಾಗಾರಗಳು ನಡೆಯಲಿವೆ. ಕಾರ್ಯಾಗಾರಗಳ ಉದ್ಘಾಟನೆಯಲ್ಲಿ ಡಾ. ಸಿ.ಎಂ. ಸಿದ್ದಲಿಂಗಪ್ಪ, ಡಾ. ಜಿ. ವಿನಾಯಕ, ಡಾ. ಎಂ.ಎಸ್. ಕೌಶಿಕ್, ಡಾ. ಕೆ. ರಮೇಶ್ ಬಾಬು ಹಾಗೂ ಶಿವಮೊಗ್ಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಕೆ.ಎಸ್. ನಟರಾಜ್ ಭಾಗವಹಿಸಲಿದ್ದಾರೆ.

ಸಮ್ಮೇಳನದ ಅಂಗವಾಗಿ ವಿವಿಧ ವೈದ್ಯಕೀಯ ವಿಭಾಗಗಳ ತಜ್ಞರಿಂದ ವೈಜ್ಞಾನಿಕ ಅಧಿವೇಶನಗಳು ಹಾಗೂ ನಿರಂತರ ವೈದ್ಯಕೀಯ ಶಿಕ್ಷಣ (ಸಿಎಂಇ) ಕಾರ್ಯಕ್ರಮಗಳನ್ನು ಆಯೋಜಿಸಲಾಗಿದೆ. ಆಧುನಿಕ ವೈದ್ಯಕೀಯ ಬೆಳವಣಿಗೆಗಳು, ಸಾಕ್ಷ್ಯಾಧಾರಿತ ಚಿಕಿತ್ಸಾ ಪದ್ಧತಿಗಳು ಮತ್ತು ಪ್ರಸ್ತುತ ಆರೋಗ್ಯ ಸವಾಲುಗಳ ಕುರಿತು ಚರ್ಚೆ ನಡೆಯಲಿದೆ. ಅ. 24ರಂದು ಬೆಳಿಗ್ಗೆ 10ಕ್ಕೆ ನಡೆಯುವ ಸಿಎಂಇ ಉದ್ಘಾಟನೆಯಲ್ಲಿ ಆಂಧ್ರಪ್ರದೇಶ ಐಎಂಎ ನಿಯೋಜಿತ ರಾಜ್ಯಾಧ್ಯಕ್ಷ ಡಾ. ಪಿ.ಎಸ್. ಶರ್ಮಾ ಹಾಗೂ ಕರ್ನಾಟಕ ವೈದ್ಯಕೀಯ ಮಂಡಳಿ ಅಧ್ಯಕ್ಷ ಡಾ. ವೈ.ಸಿ. ಯೋಗಾನಂದ ರೆಡ್ಡಿ ಭಾಗವಹಿಸಲಿದ್ದಾರೆ ಎಂದರು.

ಸಮ್ಮೇಳನದ ವೈಜ್ಞಾನಿಕ ಸಮಿತಿ ಅಧ್ಯಕ್ಷ ಡಾ. ಎನ್. ಶ್ರೀಕಾಂತ್ ಹೆಗ್ಡೆ ಮಾತನಾಡಿ, ಡಾ. ಪಿ. ನಾರಾಯಣ ಹಾಗೂ ಡಾ. ಶಿವರಾಮಕೃಷ್ಣ ಅವರ ವಿಶೇಷ ಉಪನ್ಯಾಸಗಳು ನಡೆಯಲಿವೆ. ವೈದ್ಯಕೀಯ ಕ್ಷೇತ್ರಕ್ಕೆ ನೀಡಿದ ಕೊಡುಗೆ ಹಾಗೂ ಸೇವೆಯನ್ನು ಗುರುತಿಸಿ ಡಾ. ಪ್ರಶಾಂತ್ ಇಸ್ಲೂರು ಅವರನ್ನು ಸನ್ಮಾನಿಸಲಾಗುವುದು ಎಂದರು.

ಸಮಾಜಕ್ಕೆ ಮಹತ್ವದ ಕೊಡುಗೆ ನೀಡಿದ ಗಣ್ಯರಿಗೆ ಐಎಂಎ ಸಾರ್ವಜನಿಕ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುವುದು. ಐದು ದಶಕಗಳ ಪತ್ರಿಕೋದ್ಯಮ ಸೇವೆ ಸಲ್ಲಿಸಿರುವ ‘ಶಿವಮೊಗ್ಗ ಟೈಮ್ಸ್‌’ ಸಂಪಾದಕ ಎಸ್. ಚಂದ್ರಕಾಂತ್, ಧಾರವಾಡದ ಭಾರತೀಯ ತಂತ್ರಜ್ಞಾನ ಸಂಸ್ಥೆಯ (ಐಐಟಿ) ಸಹಾಯಕ ಪ್ರಾಧ್ಯಾಪಕ ಹಾಗೂ ಹಸಿರು ತಂತ್ರಜ್ಞಾನ ಸಲಹೆಗಾರ ಪ್ರೊ. ಎಲ್.ಕೆ. ಶ್ರೀಪತಿ ಮತ್ತು ಹಿರಿಯ ಚಾರ್ಟರ್ಡ್ ಅಕೌಂಟೆಂಟ್ ವಸಂತಕುಮಾರ್ ಪ್ರಶಸ್ತಿಗೆ ಆಯ್ಕೆಯಾಗಿದ್ದಾರೆ ಎಂದು ತಿಳಿಸಿದರು.

ವೈಜ್ಞಾನಿಕ ಜ್ಞಾನ ವಿನಿಮಯ, ಪ್ರಾಯೋಗಿಕ ತರಬೇತಿ ಹಾಗೂ ತಜ್ಞರ ಉಪನ್ಯಾಸಗಳ ಮೂಲಕ ವೈದ್ಯಕೀಯ ಕ್ಷೇತ್ರದ ವೃತ್ತಿಪರ ಬೆಳವಣಿಗೆಗೆ ಸಮ್ಮೇಳನ ಸಹಕಾರಿಯಾಗಲಿದೆ ಎಂದರು. ಸಂಘಟನಾ ಅಧ್ಯಕ್ಷ ಡಾ. ಕೆ.ಆರ್. ರವೀಶ್, ಸಂಘಟನಾ ಕಾರ್ಯದರ್ಶಿ ಡಾ. ವಿನಯ ಶ್ರೀನಿವಾಸ್, ಡಾ. ಎಚ್. ನಾಗರಾಜ್, ಡಾ. ಕೆ.ಆರ್. ಶ್ರೀಧರ್, ಡಾ. ಪುರುಷೋತ್ತಮ, ಡಾ. ಕೆ.ಎಸ್. ಶುಭ್ರತಾ, ಡಾ. ಹಂಸವೇಣಿ ಹಾಗೂ ಡಾ. ಕೌಸ್ತುಭ ಇದ್ದರು.

Gara

Gara

Leave a comment

error: Content is protected !!