I ಭಾಜಪ ಮುಖಂಡ ಗೋವಿಂದರಾಜು ಮೇಲೆ I ಕಾಂಗ್ರೆಸ್ ಕಾರ್ಯಕರ್ತರಿಂದ ಹಲ್ಲೆ I ಶಾಸಕ ಮುನಿರತ್ನ ಖಂಡನೆ I
ಬೆಂಗಳೂರು : ರಾಜರಾಜೇಶ್ವರಿ ನಗರ ಕ್ಷೇತ್ರದ ಮಲ್ಲತ್ತಹಳ್ಳಿಯ ಅಂಬೇಡ್ಕರ್ ಕಾಲೇಜು ಸಮೀಪ ಶಿಕ್ಷಕರ ಕ್ಷೇತ್ರದ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ಮುಖಂಡರಾದ ಗೋವಿಂದರಾಜು ಅವರ ಮೇಲೆ ಕಾಂಗ್ರೆಸ್ ಕಾರ್ಯಕರ್ತರು ಹಲ್ಲೆ ನಡೆಸಿದ್ದಾರೆ ಎಂದು ಆರೋಪಿಸಿ ಸಂತ್ರಸ್ತರೊಂದಿಗೆ ಭಾಜಪ ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರು ಸ್ಥಳದಲ್ಲೇ ಪ್ರತಿಭಟನೆ ನಡೆಸಿದ ಘಟನೆ ಇಂದು ಜರುಗಿದೆ,
ಈ ಸಂದರ್ಭದಲ್ಲಿ ಸ್ಥಳೀಯ ಶಾಸಕರಾದ ಮುನಿರತ್ನರವರು ಮಾತಾನಾಡಿ ಘಟನೆಯನ್ನು ಗಂಭೀರವಾಗಿ ಪರಿಗಣಿಸಿ, ಸಂತ್ರಸ್ತರಾದ ಗೋವಿಂದರಾಜು ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಹಾಗೂ ತಪ್ಪಿತಸ್ಥರ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ
ಕಾಂಗ್ರೆಸ್ ಪಕ್ಷದ ನೇತೃತ್ವದ ಆಡಳಿತದಲ್ಲಿ ಹಿಂಸಾಚಾರಕ್ಕೆ ಕೊನೆ ಎಂದು ಈ ಮೂಲಕ ಪ್ರಶ್ನಿಸಿದರು ಅಲ್ಲದೆ ಅನ್ಯಾಯದ ವಿರುದ್ಧ ಹೋರಾಟ, ನ್ಯಾಯಕ್ಕಾಗಿ ಒಗ್ಗಟ್ಟಿನ ಧ್ವನಿ. ಭಾಜಪದ್ದಾಗಿದೆ ಎಂದು ಈ ಸಂದರ್ಭದಲ್ಲಿ ತಿಳಿಸಿದರು, ಪ್ರತಿಭಟನೆಯಲ್ಲಿ ಕಾರ್ಯಕರ್ತರು, ಮುಖಂಡರು ಭಾಗವಹಿಸಿದ್ದರು

