Saturday, 31 October 2026 — Suryagagana
03:31 AM
ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I
ಸೂರ್ಯಗಗನ

I ದೇಶಕ್ಕಾಗಿ ಹೋರಾಡಿದ ಮಹನೀಯರ ಬಗ್ಗೆ ಯುವ ಪೀಳಿಗೆಗೆ ತಿಳಿಸಬೇಕು I ಶಾಸಕ ಎಸ್.ಎನ್. ಚನ್ನಬಸಪ್ಪ I

I ದೇಶಕ್ಕಾಗಿ ಹೋರಾಡಿದ ಮಹನೀಯರ ಬಗ್ಗೆ ಯುವ ಪೀಳಿಗೆಗೆ ತಿಳಿಸಬೇಕು I ಶಾಸಕ ಎಸ್.ಎನ್. ಚನ್ನಬಸಪ್ಪ I ಶಿವಮೊಗ್ಗ,  : ಇಂದಿನ ಯುವ ಪೀಳಿಗೆಗೆ ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ದೇಶಕ್ಕಾಗಿ ಹೋರಾಡಿದ ವೀರ ನಾರಿಯರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳು…

I ದೇಶಕ್ಕಾಗಿ ಹೋರಾಡಿದ ಮಹನೀಯರ ಬಗ್ಗೆ ಯುವ ಪೀಳಿಗೆಗೆ ತಿಳಿಸಬೇಕು I ಶಾಸಕ ಎಸ್.ಎನ್. ಚನ್ನಬಸಪ್ಪ I

ಶಿವಮೊಗ್ಗ,  : ಇಂದಿನ ಯುವ ಪೀಳಿಗೆಗೆ ಕಿತ್ತೂರು ರಾಣಿ ಚೆನ್ನಮ್ಮ ಸೇರಿದಂತೆ ದೇಶಕ್ಕಾಗಿ ಹೋರಾಡಿದ ವೀರ ನಾರಿಯರು ಮತ್ತು ಸ್ವಾತಂತ್ರ್ಯ ಹೋರಾಟಗಾರರ ಆದರ್ಶಗಳು ಹಾಗೂ ಇತಿಹಾಸದ ಬಗ್ಗೆ ಸರಿಯಾದ ತಿಳುವಳಿಕೆ ಮೂಡಿಸಬೇಕಾದ ಅತ್ಯಗತ್ಯವಿದೆ ಎಂದು ಶಾಸಕ ಎಸ್.ಎನ್. ಚನ್ನಬಸಪ್ಪ ತಿಳಿಸಿದರು. ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಮಹಾನಗರ ಪಾಲಿಕೆ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ನಗರದ ಕುವೆಂಪು ರಂಗಮಂದಿರದಲ್ಲಿ ಶುಕ್ರವಾತ ಆಯೋಜಿಸಲಾಗಿದ್ದ ‘ವೀರವನಿತೆ ಕಿತ್ತೂರು ರಾಣಿ ಚೆನ್ನಮ್ಮ ಜಯಂತಿ’ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.

 

ಜನರಿರುವಲ್ಲಿಗೆ ಜಯಂತಿ ತಲುಪಲಿ: ಕೇವಲ ಕುವೆಂಪು ರಂಗಮಂದಿರದಂತಹ ಸೀಮಿತ ಸ್ಥಳಗಳಿಗೆ ಜಯಂತಿಗಳನ್ನು ಸೀಮಿತಗೊಳಿಸಬಾರದು. ಜಯಂತಿಗಳಿಗೆ ಸಾರ್ವಜನಿಕರು ಬರುವುದು ಕಷ್ಟವಾಗುವುದರಿಂದ, ಶಾಲಾ-ಕಾಲೇಜುಗಳಿಗೆ ತೆರಳಿ ಆಚರಣೆ ಮಾಡಿದರೆ ಹೆಚ್ಚು ಪರಿಣಾಮಕಾರಿಯಾಗುತ್ತದೆ. ಮುಂದಿನ ಬಾರಿ ಶಾಲಾ-ಕಾಲೇಜುಗಳಲ್ಲಿ ಆಚರಿಸಲು ನಮ್ಮ ಸಂಪೂರ್ಣ ಸಹಕಾರವಿದೆ.

ಕಿತ್ತೂರು ಚೆನ್ನಮ್ಮ, ಕೆಳದಿ ಚೆನ್ನಮ್ಮ, ಜಾನ್ಸಿ ರಾಣಿ ಲಕ್ಷ್ಮಿಬಾಯಿ ಮುಂತಾದ ಮಹನೀಯರನ್ನು ಯಾವುದೇ ನಿರ್ದಿಷ್ಟ ಜಾತಿಗೆ ಸೀಮಿತಗೊಳಿಸಬಾರದು. ಬ್ರಿಟಿಷರ ದಾಸ್ಯದಿಂದ ಭಾರತವನ್ನು ಮುಕ್ತಗೊಳಿಸಲು ರಾಜ-ಮಹಾರಾಜರು ಹಾಗೂ ದೇಶಪ್ರೇಮಿಗಳು ಮಾಡಿದ ತ್ಯಾಗ-ಬಲಿದಾನಗಳನ್ನು ಯುವಜನತೆಗೆ ತಿಳಿಸುವುದು ಸಮಾಜದ ಕರ್ತವ್ಯವಾಗಿದೆ ಎಂದರು.

ವಿಶೇಷ ಉಪನ್ಯಾಸ ನೀಡಿದ ನಿವೃತ್ತ ಉಪನ್ಯಾಸಕಿ ಪ್ರೊ. ಕಿರಣ್ ದೇಸಾಯಿ ಮಾತನಾಡಿ, ಇತಿಹಾಸದಲ್ಲಿ ಕೇವಲ ಪುರುಷರಷ್ಟೇ ಅಲ್ಲದೆ ಮಹಿಳೆಯರೂ ಆಡಳಿತ, ಧೈರ್ಯ ಮತ್ತು ಸಾಂಸ್ಕೃತಿಕ ರಂಗದಲ್ಲಿ ಮುಂಚೂಣಿಯಲ್ಲಿದ್ದರು ಎಂದರು.

ಅತ್ತಿಮಬ್ಬೆಯವರು ದಾನ-ಸಾಹಿತ್ಯದ ಮೂಲಕ ಜ್ಞಾನ ಭಂಡಾರ ಬೆಳೆಸಿದರೆ, ರಾಣಿ ಶಾಂತಲೆಯು ಸಾಂಸ್ಕೃತಿಕವಾಗಿ ನಾಡಿನ ಮನಸ್ಸನ್ನು ನಿರ್ಮಿಸಿದರು.

ವೀರ ವನಿತೆಯರ ಪ್ರೇರಣೆ: ವಿದೇಶಿಯರ ವಿರುದ್ಧ ಹೋರಾಡಿದ ರಾಣಿ ಅಬ್ಬಕ್ಕ, ಬೆಳವಡಿ ಮಲ್ಲಮ್ಮ, ಒನಕೆ ಓಬವ್ವ ಹಾಗೂ ಬ್ರಿಟಿಷರಿಗೆ ಮೊದಲ ಸೋಲುಣಿಸಿದ ಕಿತ್ತೂರು ಚೆನ್ನಮ್ಮ ಅವರ ಧೈರ್ಯ ಎಲ್ಲರಿಗೂ ಮಾದರಿ ಎಂದರು.

1778ರ ಅಕ್ಟೋಬರ್ 23 ರಂದು ಬೆಳಗಾವಿ ಜಿಲ್ಲೆಯ ಕಾಕತಿಯಲ್ಲಿ ದೇಸಾಯಿ ಧೂಳಪ್ಪಗೌಡರ ಪುತ್ರಿಯಾಗಿ ಜನಿಸಿದ ಚೆನ್ನಮ್ಮ, ಚಿಕ್ಕಂದಿನಲ್ಲೇ ಕುದುರೆ ಸವಾರಿ, ಕತ್ತಿವರಸೆ ಹಾಗೂ ಬಿಲ್ಲುಗಾರಿಕೆಯಲ್ಲಿ ಪರಿಣತಿ ಪಡೆದಿದ್ದರು. 15ನೇ ವಯಸ್ಸಿನಲ್ಲಿ ಮಲ್ಲಸರ್ಜ ಅವರೊಂದಿಗೆ ವಿವಾಹವಾದರು. ನಂತರ ತಮ್ಮ ದತ್ತು ಮಗನಿಗೆ ಪಟ್ಟಕಟ್ಟಿ, ಗುರುಪುತ್ರ ಮತ್ತು ಸಂಗೊಳ್ಳಿ ರಾಯಣ್ಣನವರ ಸಹಾಯದೊಂದಿಗೆ ಬ್ರಿಟಿಷ್ ಈಸ್ಟ್ ಇಂಡಿಯಾ ಕಂಪನಿಯ ವಿರುದ್ಧ ಧೀರ ಹೋರಾಟ ನಡೆಸಿದರು ಎಂದರು.
ರಾಜ್ಯ ವೀರಶೈವ ಪಂಚಮಸಾಲಿ ಸಂಘ ರಾಜ್ಯ ಸಂಘಟನಾ ಕಾರ್ಯದರ್ಶಿ ಎಂ. ಸಿದ್ದೇಶ್ವರ ಬೇಗೂರು ಮಾತನಾಡಿ, ಬ್ರಿಟಿಷರ ವಿರುದ್ಧ ಹೋರಾಡಿದ ಪ್ರಥಮ ಮಹಿಳೆ ಕಿತ್ತೂರು ಚೆನ್ನಮ್ಮ. ಇಂತಹ ವೀರವನಿತೆಯ ಜಯಂತಿಯನ್ನು ಮುಂದಿನ ದಿನಗಳಲ್ಲಿ ಶಾಲಾ-ಕಾಲೇಜುಗಳಲ್ಲಿ ಆಚರಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಗುವುದು ಎಂದರು.

ರಾಜ್ಯ ವೀರಶೈವ ಪಂಚಮಸಾಲಿ ಸಂಘದ ಜಿಲ್ಲಾಧ್ಯಕ್ಷ ಚಂದ್ರಪ್ಪ ಮಾತನಾಡಿ, ದೇಶಕ್ಕಾಗಿ ಹೋರಾಡಿದ ವೀರವನಿತೆಯ ಜಯಂತಿಯಲ್ಲಿ ಯಾವುದೇ ಭೇದಭಾವವಿಲ್ಲದೆ ಎಲ್ಲರೂ ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಬೇಕು ಎಂದು ಕರೆ ನೀಡಿದರು.

ಕಾರ್ಯಕ್ರಮದಲ್ಲಿ ವೀರಶೈವ ಪಂಚಮಸಾಲಿ ಸಂಘದ ತಾಲೂಕು ಅಧ್ಯಕ್ಷ ಟಿ.ಎನ್. ಕುಮಾರ್, ಸಮಾಜದ ಮುಖಂಡರಾದ ಮಹೇಶ್ವರಪ್ಪ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಉಮೇಶ್ ಹೆಚ್., ತಹಶೀಲ್ದಾರ್ ಲಿಂಗರಾಜ್ ಹಾಗೂ ವಿವಿಧ ಮುಖಂಡರು ಉಪಸ್ಥಿತರಿದ್ದರು.

Gara

Gara

Leave a comment

error: Content is protected !!