I ಪಡಿತರ ಅಕ್ಕಿ ಕಾಳಸಂತೆಯ ಪಾಲಾಗುತ್ತಿದೆ I ಜೆಡಿಎಸ್ ಕಾರ್ಯಧ್ಯಕ್ಷ ನರಸಿಂಹ ಗಂಧದಮನೆ I
ಶಿವಮೊಗ್ಗ: ರಾಜ್ಯದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯಿಂದ ತತ್ತರಿಸಿರುವ ಜನಸಾಮಾನ್ಯರಿಗೆ ಇದೀಗ ಊಟದ ಅಕ್ಕಿಯ ಬೆಲೆಯೂ ಭಾರಿ ಹೊರೆಯಾಗಿದೆ. ಉತ್ತಮ ಗುಣಮಟ್ಟದ ಅಕ್ಕಿ ಕೆ.ಜಿ.ಗೆ ಬರೋಬ್ಬರಿ ೧೫೦ ತಲುಪಿದ್ದು, ಬಡ ಹಾಗೂ ಮಧ್ಯಮ ವರ್ಗದ ಕುಟುಂಬಗಳಿಗೆ ದಿನನಿತ್ಯದ ಊಟ ನಿರ್ವಹಿಸುವುದೇ ಸವಾಲಾಗಿದೆ. ಇಂತಹ ಸಂಕಷ್ಟದ ಸಂದರ್ಭದಲ್ಲಿ ಬಡವರಿಗೆ ಉಚಿತವಾಗಿ ವಿತರಿಸಬೇಕಾದ ಪಡಿತರ ಅಕ್ಕಿಯೇ ಕಾಳಸಂತೆ ಪಾಲಾಗುತ್ತಿರುವ ಗಂಭೀರ ಆರೋಪವನ್ನು ಜೆಡಿಎಸ್ ಕಾರ್ಯಧ್ಯಕ್ಷ ನರಸಿಂಹ ಗಂಧದಮನೆ ಮಾಡಿದ್ದಾರೆ.
ಜಿಲ್ಲೆಯಾದ್ಯಂತ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಸಂಗ್ರಹಿಸಿ, ರೈಸ್ ಮಿಲ್‌ಗಳಲ್ಲಿ ಪಾಲಿಶ್ ಮಾಡಿ, ಹೊಸ ಬ್ರ್ಯಾಂಡ್ ಹೆಸರಿನಲ್ಲಿ ಮಾರುಕಟ್ಟೆಯಲ್ಲಿ ದುಬಾರಿ ಬೆಲೆಗೆ ಮಾರಾಟ ಮಾಡುವ ದಂಧೆ ನಿರಂತರವಾಗಿ ನಡೆಯುತ್ತಿದೆ. ಈ ಅಕ್ರಮಕ್ಕೆ ಕಡಿವಾಣ ಹಾಕಬೇಕಾದ ಜಿಲ್ಲಾಡ ಳಿತ ಹಾಗೂ ಆಹಾರ ಇಲಾಖೆಯ ಅಧಿಕಾರಿಗಳು ಮೌನ ವಹಿಸಿರು ವುದು ಹಲವು ಅನುಮಾನಗಳಿಗೆ ಕಾರಣವಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಈ ಹಿಂದೆ ಆ.೧೯ರಂದು ಜೆಡಿಎಸ್ ವತಿಯಿಂದ ಈ ಕುರಿತು ಎಚ್ಚರಿಕೆ ನೀಡಲಾಗಿತ್ತು. ಖಾಸಗಿ ಗೋದಾಮುಗಳು ಹಾಗೂ ರೈಸ್ ಮಿಲ್‌ಗಳ ಮೇಲೆ ಜಿಲ್ಲಾಡಳಿತ, ಆಹಾರ ಮತ್ತು ಪೊಲೀಸ್ ಇಲಾಖೆಗಳು ಜಂಟಿ ದಾಳಿ ನಡೆಸಿ ಅಕ್ರಮವಾಗಿ ಸಂಗ್ರಹಿಸಿರುವ ಅಕ್ಕಿಯನ್ನು ವಶಪಡಿಸಿಕೊಳ್ಳಬೇಕೆಂದು ಆಗ್ರಹಿ ಲಾಗಿತ್ತು. ಆದರೆ ಈವರೆಗೆ ಯಾವುದೇ ಪರಿಣಾಮಕಾರಿ ಕ್ರಮ ಕೈಗೊಳ್ಳದಿರುವುದು ಕಾಳಸಂತೆ ದಂಧೆಕೋರರಿಗೆ ಪರೋಕ್ಷ ರಕ್ಷಣೆ ನೀಡಿದಂತಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.
ಬಡವರ ಅಕ್ಕಿಯಲ್ಲೂ ಕಾಳಸಂತೆ ದಂಧೆ : ಜಿಲ್ಲೆಯಲ್ಲಿ ಪ್ರತಿ ತಿಂಗಳು ವಿತರಿಸಲಾಗುವ ಸುಮಾರು ೨.೧೭ ಲಕ್ಷ ಮೆಟ್ರಿಕ್ ಟನ್ ಪಡಿತರ ಅಕ್ಕಿಯ ಪೂರೈಕೆ ಮತ್ತು ವಿತರಣಾ ವ್ಯವಸ್ಥೆಯಲ್ಲಿ ಅಕ್ರಮಗಳು ನಡೆಯುತ್ತಿವೆ ಎಂಬ ಆರೋಪವಿದೆ. ನ್ಯಾಯಬೆಲೆ ಅಂಗಡಿಗಳಲ್ಲಿ ಪ್ರತಿ ಚೀಲಕ್ಕೆ ೩ರಿಂದ ೪ ಕೆ.ಜಿ. ಅಕ್ಕಿ ಕಡಿತ ಗೊಳಿಸುವ ಮೂಲಕ ಬಡ ಫಲಾ ನುಭವಿಗಳಿಗೆ ವಂಚಿಸಲಾಗುತ್ತಿದೆ. ಹೀಗೆ ಸಂಗ್ರಹವಾಗುವ ಅಕ್ಕಿಯನ್ನು ಖಾಸಗಿ ಗೋದಾಮುಗಳಲ್ಲಿ ದಾಸ್ತಾನು ಮಾಡಿ, ರೈಸ್ ಮಿಲ್‌ಗಳ ಮೂಲಕ ಪಾಲಿಶ್ ಮಾಡಿಸಿ ಕೆ.ಜಿ.ಗೆ ೬೦ ರಿಂದ ೧೪೦-೧೫೦ರವರೆಗೆ ಮಾರಾಟ ಮಾಡಲಾಗುತ್ತಿದೆ ಎಂದು ಜೆಡಿಎಸ್ ದೂರಿದೆ.
ಎಫ್‌ಸಿಐ ಮೂಲಕ ಪೂರೈಕೆ ಯಾಗುವ ಅಕ್ಕಿಯೂ ಅಕ್ರಮವಾಗಿ ಬೇರೆಡೆಗೆ ಸಾಗಣೆಯಾಗುತ್ತಿರುವ ಸಾಧ್ಯತೆಯಿದ್ದು, ಈ ಬಗ್ಗೆ ಸಮಗ್ರ ತನಿಖೆ ನಡೆಸಬೇಕೆಂದು ಒತ್ತಾಯಿಸಿದೆ.
ಅಧಿಕಾರಿಗಳ ನಿರ್ಲಕ್ಷ್ಯಕ್ಕೆ ಆಕ್ರೋಶ : ಪಡಿತರ ಅಕ್ಕಿಯ ಅಕ್ರಮ ಸಂಗ್ರಹ ಮತ್ತು ಮಾರಾಟದ ಬಗ್ಗೆ ಈಗಾಗಲೇ ಎಚ್ಚರಿಕೆ ನೀಡಿದ್ದರೂ ಆಹಾರ ಇಲಾಖೆ ಅಧಿಕಾರಿಗಳು ಸಮರ್ಪಕ ತನಿಖೆ ನಡೆಸಿಲ್ಲ. ಅಕ್ರ ಮದ ಮಾಹಿತಿ ಇದ್ದರೂ ಆಹಾರ ಇಲಾಖೆಯ ಶಿರಸ್ತೇದಾರರು ಹಾಗೂ ನಿರೀಕ್ಷಕರು ಕ್ರಮ ಕೈಗೊಳ್ಳದೆ ಕಣ್ಮುಚ್ಚಿ ಕುಳಿತಿದ್ದಾರೆ ಎಂಬ ಗಂಭೀರ ಆರೋಪ ಮಾಡಿರುವ ಜೆಡಿಎಸ್, ಕರ್ತವ್ಯಲೋಪ ಎಸಗಿ ರುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದೆ. ಬಡವರ ಹಸಿವಿನ ಹಕ್ಕನ್ನೇ ವ್ಯಾಪಾರದ ಸರಕಾಗಿಸಿಕೊಂಡಿರುವ ದಂಧೆಕೋರರ ವಿರುದ್ಧ ಕಠಿಣ ಕ್ರಮ ಕೈಗೊಳ್ಳದಿದ್ದರೆ ಸರ್ಕಾರದ ಉಚಿತ ಪಡಿತರ ಯೋಜನೆಯ ಉದ್ದೇಶವೇ ವಿಫಲವಾಗಲಿದೆ ಎಂದು ಎಚ್ಚರಿಸಿದೆ.