Saturday, August 1, 2026
Homeಸೂರ್ಯಗಗನI ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ I ಲಾಂಛನ ಬಿಡುಗಡೆ ಮಾಡಿದ ಸಿಎಂ I

I ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ I ಲಾಂಛನ ಬಿಡುಗಡೆ ಮಾಡಿದ ಸಿಎಂ I

 I ಪತ್ರಿಕಾ ವಿತರಕರ ರಾಜ್ಯ ಸಮ್ಮೇಳನದ I ಲಾಂಛನ ಬಿಡುಗಡೆ ಮಾಡಿದ ಸಿಎಂ I

ಬೆಂಗಳೂರು: ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟ ಹಾಗೂ ಮೈಸೂರು ಪತ್ರಿಕಾ ವಿತರಕರ ಕ್ಷೇಮಾಭಿವೃದ್ಧಿ ಸಂಘದ ಸಂಯುಕ್ತಾಶ್ರಯದಲ್ಲಿ ಮೈಸೂರಿನಲ್ಲಿ ಆ.28ರಂದು ನಡೆಯಲಿರುವ ರಾಜ್ಯ ಸಮ್ಮೇಳನದ ಲಾಂಛನವನ್ನು ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಬಿಡುಗಡೆ ಮಾಡಿ ಶುಭ ಹಾರೈಸಿದರು.

ಪತ್ರಿಕಾ ಅಸಂಘಟಿತ ಕಾರ್ಮಿಕ ವಲಯದ ಅಡಿಯಲ್ಲಿ ವಿತರಕರಿಗೆ ಅಪಘಾತ ಪರಿಹಾರ ವಿಮೆ ಯೋಜನೆಯ ಜಾರಿಗೆ ತಂದಿರುವುದಕ್ಕೆ ಅಭಿನಂದನೆ ಸಲ್ಲಿಸಲಾಯಿತು. ಪತ್ರಿಕಾ ವಿತರಕರಿಗೆ ಪ್ರಪ್ರಥಮ ಬಾರಿಗೆ ನೀಡಿರುವ ರಾಜ್ಯೋತ್ಸವ ಪ್ರಶಸ್ತಿ ಹಾಗೂ ಸುವರ್ಣ ರಾಜ್ಯೋತ್ಸವ ಪ್ರಶಸ್ತಿ ನೀಡಿರುವುದನ್ನು ಇದೇ ಸಂದರ್ಭದಲ್ಲಿ ಸ್ಮರಿಸಿ ಅಭಿನಂದನೆ ತಿಳಿಸಲಾಯಿತು.

ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರ ಕೆ.ವಿ.ಪ್ರಭಾಕರ್, ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯಾಧ್ಯಕ್ಷರಾದ ಶಿವಾನಂದ ತಗಡೂರು, ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯಾಧ್ಯಕ್ಷರಾದ ಕೆ.ಶಂಭುಲಿಂಗ, ಮೈಸೂರು ಜಿಲ್ಲಾ ಅಧ್ಯಕ್ಷರಾದ ಹೋಮದೇವ ಜೆ.ಎಸ್., ರಾಜ್ಯ ಪ್ರಶಸ್ತಿ ಪುರಸ್ಕೃತ ಪತ್ರಿಕಾ ವಿತರಕ ಜವರಪ್ಪ ಪತ್ರಿಕಾ ವಿತರಕರಾದ ಶ್ರೀಕಾಂತ್ ನಾಗೇಶ್ ರಾಜಶೇಖರ್ ಮತ್ತಿತರರು ಇದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I