Sunday, August 2, 2026
Homeಸೂರ್ಯಗಗನಕರಾಟೆ I ಆತ್ಮರಕ್ಷಣೆಯೊಂದಿಗೆ I ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ I ಸಿಯಾನ್ ಪಂಚಪ್ಪI

ಕರಾಟೆ I ಆತ್ಮರಕ್ಷಣೆಯೊಂದಿಗೆ I ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ I ಸಿಯಾನ್ ಪಂಚಪ್ಪI

ಕರಾಟೆ I ಆತ್ಮರಕ್ಷಣೆಯೊಂದಿಗೆ I ಆತ್ಮವಿಶ್ವಾಸ ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ I ಸಿಯಾನ್ ಪಂಚಪ್ಪI

ಸೊರಬ: ಕರಾಟೆ ಜನಪ್ರಿಯವಾದ ಸಮರ ಕಲೆಯಾಗಿದ್ದು, ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕರಾಟೆಯನ್ನು ಕಲಿಯುವುದರಿಂದ ಆತ್ಮರಕ್ಷಣೆಯೊಂದಿಗೆ ಆತ್ಮವಿಶ್ವಾಸವನ್ನು ಬೆಳೆಸಿಕೊಳ್ಳಲು ಸಾಧ್ಯವಾಗುತ್ತದೆ ಎಂದು ಕರಾಟೆ ತರಬೇತುದಾರ ಸಿಯಾನ್ ಪಂಚಪ್ಪ ಹೇಳಿದರು.

ಶನಿವಾರ ಬೆಳಗ್ಗೆ ಪಟ್ಟಣದ ಹೊಸಪೇಟೆ ಬಡಾವಣೆಯ ಆಶಾಕಿರಣ ಪಬ್ಲಿಕ್ ಶಾಲೆಯಲ್ಲಿ ಸಾಗರ ಕರಾಟೆ ಇನ್ಸ್ಟಿಟ್ಯೂಟ್ ವತಿಯಿಂದ ಹಮ್ಮಿಕೊಂಡ ಕರಾಟೆ ತರಬೇತಿ ಶಿಬಿರದ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಕ್ಕಳು ಕೇವಲ ಪಠ್ಯದಲ್ಲಿ ತೊಡಗಿಸಿಕೊಳ್ಳಬೇಕು ಎನ್ನುವ ಮನೋಭಾವದಿಂದ ಪೋಷಕರು ಹೊರ ಬರಬೇಕು. ಶಿಕ್ಷಣ ಎಷ್ಟು ಮುಖ್ಯವೋ ಅದೇ ರೀತಿಯಲ್ಲಿ ಕ್ರೀಡೆಗಳಲ್ಲಿ ತೊಡಗಿಸಿಕೊಳ್ಳುವುದರಿಂದ ದೈಹಿಕ ಮತ್ತು ಮಾನಸಿಕ ಆರೋಗ್ಯವೂ ಲಭಿಸುತ್ತದೆ. ಗ್ರಾಮೀಣ ಭಾಗದಲ್ಲಿ ಅನೇಕ ಪ್ರತಿಭೆಗಳಿದ್ದು, ಅವರಿಗೆ ತರಬೇತಿ ನೀಡಿದರೆ ಒಲಂಪಿಕ್‌ನಂತಹ ಕ್ರೀಡೆಗಳಲ್ಲೂ ಭಾಗವಹಿಸುವರಿದ್ದಾರೆ. ಪ್ರಸ್ತುತ ದಿನಮಾನಗಳಲ್ಲಿ ವಿದ್ಯಾರ್ಥಿನಿಯರ ಮೇಲೆ ದೌರ್ಜನ್ಯಗಳು ನಡೆಯುತ್ತಿದೆ. ಈ ನಿಟ್ಟಿನಲ್ಲಿ ಕರಾಟೆ ತರಬೇತಿಯು ಸ್ವರಕ್ಷಣೆಗೆ ಅತ್ಯಂತ ಸೂಕ್ತವಾಗಿದೆ ಎಂದರು.
ಕಾರ್ಯಕ್ರಮ ಉದ್ಘಾಟಿಸಿದ ಆಶಾಕಿರಣ ಪಬ್ಲಿಕ್ ಶಾಲೆ ಮುಖ್ಯಸ್ಥ ಹಾಗೂ ಮಾಜಿ ಯೋಧ ಯು. ಸಂಗಪ್ಪ ಮಾತನಾಡಿ, ದೈಹಿಕವಾಗಿ ಮತ್ತು ಮಾನಸಿಕವಾಗಿ ಸದೃಢವಾಗಿದ್ದರೆ ಮಾತ್ರ ಕಲಿಕೆಯಲ್ಲಿ ಆಸಕ್ತಿ ಮೂಡಲು ಸಾಧ್ಯವಾಗುತ್ತದೆ. ಬಹುಉಪಕಾರಿಯಾದ ಕರಾಟೆ ಹಾಗೂ ಯೋಗವನ್ನು ದೈನಂದಿನ ಜೀವನದಲ್ಲಿ ಅಳವಡಿಸಿಕೊಳ್ಳಬೇಕು. ಕರಾಟೆ ತರಬೇತಿಯಿಂದ ಸಾಮರ್ಥ್ಯವು ಸಹ ಹೆಚ್ಚುತ್ತದೆ ಮತ್ತು ಕ್ರಿಯಾಶೀಲರಾಗಲು ಸಾಧ್ಯವಾಗುತ್ತದೆ ಎಂದರು.

ಪೋಷಕ ಪ್ರತಿನಿಧಿ ರಾಜು ಹಿರಿಯಾವಲಿ, ಸಂಸ್ಥೆಯ ಮುಖ್ಯಶಿಕ್ಷಕಿ ಯು. ಶೋಭಾ, ಸಹಶಿಕ್ಷಕರಾದ ಚಂದ್ರಶೇಖರ್, ಹೇಮಾವತಿ, ಸುಮಲತಾ, ಸುಪ್ರಜಾ, ಸಂಪ್ರತಾ, ರಾಧಿಕಾ, ಪ್ರವೀಣ್, ಅಮೃತಾ, ಕರಾಟೆ ತರಬೇತುದಾರರಾದ ಮಧುಕೇಶ್ವರ ಹಾಗೂ ಮಧು ಯು.ಎನ್. ಸೇರಿದಂತೆ ಇತರರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I