Monday, 21 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I
ಸೂರ್ಯಗಗನ

I ಸರಿ ದಾರಿಯಲ್ಲಿ ವಿದ್ಯಾರ್ಥಿಗಳು ಸಾಗಲಿ, ಅವಕಾಶಗಳು ಸದ್ಬಳಕೆ ಆಗಲಿ I ದಾವಣಗೆರೆ ಪೂರ್ವ ವಲಯ ಪೋಲಿಸ್ ಮಹಾ ನಿರೀಕ್ಷಕ  ಡಾ. ರವಿಕಾಂತೇ ಗೌಡ I

I ಸರಿ ದಾರಿಯಲ್ಲಿ ವಿದ್ಯಾರ್ಥಿಗಳು ಸಾಗಲಿ, ಅವಕಾಶಗಳು ಸದ್ಬಳಕೆ ಆಗಲಿ I ದಾವಣಗೆರೆ ಪೂರ್ವ ವಲಯ ಪೋಲಿಸ್ ಮಹಾ ನಿರೀಕ್ಷಕ  ಡಾ. ರವಿಕಾಂತೇ ಗೌಡ I ಶಿವಮೊಗ್ಗ: ಜೀವನದಲ್ಲಿ ಯಶಸ್ಸು ಲಭಿಸಬೇಕು ಎಂದರೆ, ಸಿಕ್ಕಂತಹ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಈ ಹಂತದಲ್ಲಿ…
I ಸರಿ ದಾರಿಯಲ್ಲಿ ವಿದ್ಯಾರ್ಥಿಗಳು ಸಾಗಲಿ, ಅವಕಾಶಗಳು ಸದ್ಬಳಕೆ ಆಗಲಿ I ದಾವಣಗೆರೆ ಪೂರ್ವ ವಲಯ ಪೋಲಿಸ್ ಮಹಾ ನಿರೀಕ್ಷಕ  ಡಾ. ರವಿಕಾಂತೇ ಗೌಡ I
ಶಿವಮೊಗ್ಗ: ಜೀವನದಲ್ಲಿ ಯಶಸ್ಸು ಲಭಿಸಬೇಕು ಎಂದರೆ, ಸಿಕ್ಕಂತಹ ಅವಕಾಶವನ್ನು ಸದುಪಯೋಗ ಪಡಿಸಿಕೊಳ್ಳಬೇಕು. ಈ ಹಂತದಲ್ಲಿ ಯಾರು ಎಡವುತ್ತಾರೋ ಅವರು ಜೀವನದ ಪಥದಲ್ಲಿ ಹಿಂದೆ ಉಳಿಯುತ್ತಾರೆ. ಆದ್ದರಿಂದ ಸರಿ ಮತ್ತು ತಪ್ಪಿನ ಅರಿವನ್ನು ತಿಳಿದು ಯಶಸ್ವಿ ವ್ಯಕ್ತಿಗಳಾಗಿ ಹೊರಹೊಮ್ಮಬೇಕು ಎಂದು ದಾವಣಗೆರೆ ಪೂರ್ವ ವಲಯ ಪೋಲಿಸ್ ಮಹಾ ನಿರೀಕ್ಷಕರಾದ ಡಾ. ರವಿಕಾಂತೇ ಗೌಡ ಹೇಳಿದರು.
ಜಿಲ್ಲಾ ಪೊಲೀಸ್ ವತಿಯಿಂದ ನಗರದ ವಿವಿಧ ಪದವಿ ಕಾಲೇಜಿನಲ್ಲಿ ಪ್ರಥಮ ಹಾಗೂ ದ್ವೀತಿಯ ವರ್ಷದಲ್ಲಿ ಪದವಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ಸಮರ್ಥ ಸೇತು-ಯುವ ಶಕ್ತಿ ಅಭಿಯಾನ ಕಾರ್ಯಕ್ರಮದ ಸಮಾರೋಪ ಸಮಾರಂಭ ಡಿಎಆರ್ ಪೊಲೀಸ್ ಸಭಾಂಗಣದಲ್ಲಿ ಶನಿವಾರ ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ಸಾಮಾನ್ಯವಾಗಿ ಸಾರ್ವಜನಿಕರಿಗೆ ಪೊಲೀಸ್ ಇಲಾಖೆಯನ್ನು ಕಂಡರೆ ಒಂದು ರೀತಿಯ ಭಯ*ಲ್ ಇದ್ದೇ ಇರುತ್ತದೆ. ನಿಮ್ಮ ಈ ಒಂದು ಆಲೋಚನೆಯನ್ನು ದೂರಗೊಳಿಸಿ ಪೊಲೀಸ್ ಇಲಾಖೆಯಲ್ಲಿರುವಂತಹ ಸಂಪನ್ಮೂಲಗಳನ್ನು ಬಳಸಿಕೊಂಡು ನಿಮ್ಮನ್ನು ಸದೃಢ ಪ್ರಜೆಯನ್ನಾಗಿ ರೂಪಿಸುವ ಉದ್ದೇಶದಿಂದ ಈ ಕಾರ್ಯಕ್ರಮವನ್ನು ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ಆಯೋಜಿಸಲಾಗಿದೆ ಎಂದರು.
ಸ್ವಾಮಿ ವಿವೇಕಾನಂದರು ತಿಳಿಸಿರುವಂತಹ ರೀತಿಯಲ್ಲಿ, ಒಬ್ಬ ವ್ಯಕ್ತಿಯಲ್ಲಿರುವಂತಹ ಶಕ್ತಿಯನ್ನು ಪ್ರಚೋದಿಸಿ ಅದನ್ನು ಮುಂದೆ ತಂದು, ಆ ವ್ಯಕ್ತಿಯನ್ನು ಅಭಿವೃದ್ಧಿಯ ಪಥದಲ್ಲಿ ಕರೆದುಕೊಂಡು ಹೋಗುವುದೇ ವಿದ್ಯಾರ್ಜನೆ ಆಗಿರುತ್ತದೆ ಎಂದರು.
ಎಷ್ಟೋ ಬಾರಿ ಯಾವುದೇ ಕೆಲಸವು ಆತ್ಮವಿಶ್ವಾಸದ ಕೊರತೆಯಿಂದ ಸಾಧಿಸಲು ಸಾಧ್ಯವಾಗದೆ ಇರುವಂತಹ ಪರಿಸ್ಥಿತಿ ನಿರ್ಮಾಣವಾಗುತ್ತದೆ. ಈ ಕಾರ್ಯಕ್ರಮದ ಮುಖಾಂತರ ನಿಮ್ಮಲ್ಲಿ ಆತ್ಮವಿಶ್ವಾಸವನ್ನು ತಂದು ಯಾವುದೇ ಕಾರ್ಯವನ್ನು ನಾನು ಸಾಧಿಸಬಲ್ಲೆ ಎಂಬಂತಹ ದೃಢ ನಿರ್ಧಾರವನ್ನು ನೀವು ತೆಗೆದುಕೊಳ್ಳಲು ಸಶಕ್ತರನ್ನಾಗಿ ಮಾಡುವುದೇ ಮೂಲ ಉದ್ದೇಶ ಎಂದರು.
ಯಶಸ್ಸಿನ ಮೂಲ ಮಂತ್ರವೇ ಶಿಸ್ತಿನ ಚೌಕಟ್ಟಿನಲ್ಲಿ ಮುಂದೆ ಸಾಗುತ್ತಾ ಹೋಗುವುದು. ಯಾವುದೋ ಅನಾವಶ್ಯಕ ವಿಷಯಗಳಲ್ಲಿ ನೀವು ನಿಮ್ಮ ಮನಸ್ಸನ್ನು ಹರಿಬಿಟ್ಟು ಸಮಯ ವ್ಯಯ ಮಾಡಬೇಡಿ. ಭಾರತದ ಸಂವಿಧಾನದ ಚೌಕಟ್ಟಿನ ಒಳಗೆ, ಸಂವಿಧಾನದ ಮೌಲ್ಯಗಳನ್ನು ಅರಿತುಕೊಂಡು ಜೀವಿಸಬೇಕಿರುವುದು ತುಂಬಾ ಮುಖ್ಯ ವಿರುತ್ತದೆ. ಈ ತರಬೇತಿಯ ಅವಧಿಯಲ್ಲಿ ಸಂವಿಧಾನದ ಮೌಲ್ಯ ಮತ್ತು ಸಂವಿಧಾನದ ಪ್ರಾಮುಖ್ಯತೆಯನ್ನು ನಿಮಗೆ ತಿಳಿಸಿಕೊಡುತ್ತಿರುವುದು ತುಂಬಾ ಪ್ರಮುಖವಾದ ಅಂಶವಾಗಿದೆ ಎಂದರು.
ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಕುಮಾರ್ ಮಾತನಾಡಿ,’ಪ್ರಸ್ತುತ ದಿನಮಾನಗಳಲ್ಲಿ ಯಾವ ರೀತಿಯ ಸಮಸ್ಯೆಗಳನ್ನು ಪೊಲೀಸ್ ಇಲಾಖೆಯು ಎದುರಿಸುತ್ತಿದೆ ಹಾಗೂ ಸಮಾಜದಲ್ಲಿ ಅದರಲ್ಲೂ ಪ್ರಮುಖವಾಗಿ ಯುವಜನತೆಯಲ್ಲಿ ಯಾವ ರೀತಿಯ ಬದಲಾವಣೆಗಳ ಅವಶ್ಯಕತೆ ಇರುತ್ತದೆ ಎಂಬ ವಿಚಾರದ ಆಧಾರವಾಗಿ  ಈ ಕಾರ್ಯಕ್ರಮದ ರೂಪರೇಷೆಗಳು ಸಿದ್ಧಗೊಳಿಸಲಾಗಿದೆ ಎಂದರು.
ವಿದ್ಯಾರ್ಥಿಗಳಿಗೆ ಒಳಾಂಗಣ ಮತ್ತು ಹೊರಾಂಗಣ ವಿಷಯಗಳಾಗಿ ತರಬೇತಿಯನ್ನು ಆಯೋಜಿಸಿ,  ಪೊಲೀಸ್ ಕಾರ್ಯಾ ವೈಖರಿ, ಶ್ರೇಣಿಕೃತ ಪೊಲೀಸ್ ವ್ಯವಸ್ಥೆ, ಹೊಸ ಅಪರಾಧಿಕ ಕಾನೂನುಗಳು, ಪೋಕ್ಸೋ ಕಾಯ್ದೆ, NDPS ಕಾಯ್ದೆ, ಬಾಲ್ಯ ವಿವಾಹ ನಿಷೇಧ ಕಾಯ್ದೆ, ಡ್ರಿಲ್, ಕರಾಟೆ, ಆಯುಧಗಳ ಬಗ್ಗೆ ಪರಿಚಯ, ಡಿಸಾಸ್ಟರ್ ಮ್ಯಾನೇಜ್ಮೆಂಟ್,  ಎ ಎಸ್ ಸಿ ತಂಡ, ಯೋಗ, ವ್ಯಕ್ತಿತ್ವ ವಿಕಸನ, ಸದೃಢ ಸಮಾಜದಲ್ಲಿ ವಿದ್ಯಾರ್ಥಿಗಳ ಪಾತ್ರ ಮುಂತಾದ ವಿಷಯಗಳ ಕುರಿತು ಮಾಹಿತಿ ನೀಡಲಾಗಿದೆ ಎಂದರು.
ಕಾರ್ಯಗಾರದಲ್ಲಿ ತರಬೇತಿ ಪೂರ್ಣಗೊಳಿಸಿದಂತಹ ಎಲ್ಲಾ ವಿದ್ಯಾರ್ಥಿಗಳಿಗೆ  ಪ್ರಮಾಣ ಪತ್ರ ಮತ್ತು ನೆನಪಿನ ಸ್ಮರಣಿಕೆ  ನೀಡಿ ಅಭಿನಂದಿಸಲಾಯಿತು.
ನಗರದ ವಿವಿಧ ಕಾಲೇಜುಗಳ ಒಟ್ಟು 103 ವಿಧ್ಯಾರ್ಥಿ ಹಾಗೂ ವಿದ್ಯಾರ್ಥಿನಿಯರಿಗೆ  ಒಳಾಂಗಣ ಮತ್ತು ಹೊರಾಂಗಣ ತರಬೇತಿ  ನೀಡಲಾಯಿತು.
ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ರಮೇಶ್ ಕುಮಾರ್, ಸಮನ್ವಯ ಟ್ರಸ್ಟ್  ವ್ಯವಸ್ಥಾಪಕ ಸಮನ್ವಯ ಕಾಶಿ ಕಾರ್ಯಕ್ರಮದಲ್ಲಿ  ಭಾಗವಹಿಸಿದ್ದರು.
Gara Srinivas

Gara Srinivas

Leave a comment

error: Content is protected !!