Monday, 21 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶಾಂತಿನಗರದಲ್ಲಿ ಸೌಹಾರ್ದತೆಗೆ I ಸಾಕ್ಷಿಯಾದ ಗಣೇಶೋತ್ಸವ I  ಪ್ರಶಂಸಿಸಿದ ಎಸ್ಪಿ ನಿಖಿಲ್ I ಸೂರ್ಯಗಗನ I ಸರ್ವ ಸದಸ್ಯರ ವಾರ್ಷಿಕ ಮಹಾಸಭೆ I ಪ್ರತಿಭಾ ಪುರಸ್ಕಾರ I ಸಮಾರಂಭ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I
ಸೂರ್ಯಗಗನ

I ನಿರಂತರ ಪರಿಶ್ರಮದಿಂದ ಶಿಕ್ಷಣದಲ್ಲಿ ಉನ್ನತ ಸಾಧನೆ I ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ I

I ನಿರಂತರ ಪರಿಶ್ರಮದಿಂದ ಶಿಕ್ಷಣದಲ್ಲಿ ಉನ್ನತ ಸಾಧನೆ I ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ I ಶಿವಮೊಗ್ಗ: ವಿದ್ಯಾರ್ಥಿಗಳು ನಿರಂತರ ಪರಿಶ್ರಮ ವಹಿಸಿ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹೇಳಿದರು. ನಗರದ ಕುವೆಂಪು…

I ನಿರಂತರ ಪರಿಶ್ರಮದಿಂದ ಶಿಕ್ಷಣದಲ್ಲಿ ಉನ್ನತ ಸಾಧನೆ I ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ I

ಶಿವಮೊಗ್ಗ: ವಿದ್ಯಾರ್ಥಿಗಳು ನಿರಂತರ ಪರಿಶ್ರಮ ವಹಿಸಿ ಅಧ್ಯಯನದಲ್ಲಿ ತೊಡಗಿಸಿಕೊಂಡರೆ ಜೀವನದಲ್ಲಿ ಉನ್ನತ ಸಾಧನೆ ಮಾಡಬಹುದು ಎಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿ ರಮೇಶ್ ಹೇಳಿದರು.

ನಗರದ ಕುವೆಂಪು ರಂಗಮಂದಿರದಲ್ಲಿ ದೇಶೀಯ ವಿದ್ಯಾಶಾಲಾ ಸಮಿತಿಯ ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ಆಯೋಜಿಸಿದ್ದ ಶಾಲಾ ವಾರ್ಷಿಕೋತ್ಸವ 2025 ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.

ಡಿವಿಎಸ್ ಸಂಸ್ಥೆಯು ಶಿಕ್ಷಣ ಕ್ಷೇತ್ರದಲ್ಲಿ ಮಹತ್ತರ ಸೇವೆ ಸಲ್ಲಿಸುತ್ತಿದ್ದು, ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಯಲ್ಲಿ ಉತ್ತಮ ಭವಿಷ್ಯ ರೂಪಿಸಿಕೊಳ್ಳಲು ಪೂರಕವಾದ ವಾತಾವರಣ ಸೃಷ್ಟಿಸಿದೆ. ಈ ಸಂಸ್ಥೆಯಲ್ಲಿ ಅಧ್ಯಯನ ನಡೆಸಿದ ಸಾವಿರಾರು ವಿದ್ಯಾರ್ಥಿಗಳು ಉನ್ನತ ಸ್ಥಾನ ಅಲಂಕರಿಸಿ ಸಮಾಜದ ಸೇವೆ ಸಲ್ಲಿಸುತ್ತಿದ್ದಾರೆ ಎಂದು ತಿಳಿಸಿದರು.

ವಿದ್ಯಾರ್ಥಿಗಳು ಸಂಸ್ಥೆ ಒದಗಿಸುವ ಸೌಲಭ್ಯಗಳನ್ನು ಸಮರ್ಪಕವಾಗಿ ಬಳಸಿಕೊಳ್ಳುವ ಮೂಲಕ ಉತ್ತಮ ಅಂಕಗಳನ್ನು ಗಳಿಸಬೇಕು. ನಿಮ್ಮ ಆಸಕ್ತಿ ಕ್ಷೇತ್ರದಲ್ಲಿ ಯಶಸ್ಸು ಸಾಧಿಸಬೇಕು ಎಂದು ಸಲಹೆ ನೀಡಿದರು.

ದೇಶೀಯ ವಿದ್ಯಾಶಾಲಾ ಸಮಿತಿ ಕಾರ್ಯದರ್ಶಿ ಎಸ್.ರಾಜಶೇಖರ್ ಮಾತನಾಡಿ, ಡಿವಿಎಸ್ ಶಾಲಾ ಕಾಲೇಜಿನಲ್ಲಿ ಶಿಕ್ಷಣ ಪಡೆದ ವಿದ್ಯಾರ್ಥಿಗಳು ರಾಜ್ಯ ಮತ್ತು ರಾಷ್ಟ್ರೀಯ ಮಟ್ಟದಲ್ಲಿ ವಿಶೇಷ ‌ಸಾಧನೆ ಮಾಡಿದ್ದಾರೆ. ನೀವೂ ಸಹ ದೊಡ್ಡ ಕನಸನ್ನು ಕಂಡು ಸಾಕಾರಗೊಳಿಸಬೇಕು. ಒಳ್ಳೆಯ ಜೀವನ ರೂಪಿಸಿಕೊಳ್ಳಬೇಕು. ವಿದ್ಯಾರ್ಥಿಗಳಿಗೆ ಅವಶ್ಯವಿರುವ ಎಲ್ಲ ಮಾರ್ಗದರ್ಶನವನ್ನು ಸಂಸ್ಥೆ ನೀಡುತ್ತದೆ ಎಂದು ತಿಳಿಸಿದರು.

ದೇಶೀಯ ವಿದ್ಯಾಶಾಲಾ ಸಮಿತಿ ಅಧ್ಯಕ್ಷ ಕೆ.ಎನ್.ರುದ್ರಪ್ಪ ಕೊಳಲೆ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಅಭಿನಂದಿಸಲಾಯಿತು. ವಿದ್ಯಾರ್ಥಿಗಳು ಸಾಂಸ್ಕೃತಿಕ ಕಾರ್ಯಕ್ರಮ ನಡೆಸಿಕೊಟ್ಟರು.

ದೇಶೀಯ ವಿದ್ಯಾಶಾಲಾ ಸಮಿತಿ ಉಪಾಧ್ಯಕ್ಷ ಎಸ್.ಪಿ.ದಿನೇಶ್, ಸಹ ಕಾರ್ಯದರ್ಶಿ ಡಾ. ಎ.ಸತೀಶ್ ಕುಮಾರ್ ಶೆಟ್ಟಿ, ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಚಾರ್ಯ ಸಿ.ಕೆ.ಶ್ರೀಧರ್, ಉಪನ್ಯಾಸಕರು, ಸಿಬ್ಬಂದಿ ವರ್ಗ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Gara Srinivas

Gara Srinivas

Leave a comment

error: Content is protected !!