Sunday, August 2, 2026
Homeಸೂರ್ಯಗಗನI ಅಲೆಮಾರಿ ಜನಾಂಗಕ್ಕೆ ವಸತಿ-ಸರ್ಕಾರಿ ಸೌಲಭ್ಯ ಒದಗಿಸಲು I ಅಗತ್ಯವಾದ ದಾಖಲೆಗಾಗಿ ತಹಶೀಲ್ದಾರರಿಗೆ ಸೂಚನೆ I...

I ಅಲೆಮಾರಿ ಜನಾಂಗಕ್ಕೆ ವಸತಿ-ಸರ್ಕಾರಿ ಸೌಲಭ್ಯ ಒದಗಿಸಲು I ಅಗತ್ಯವಾದ ದಾಖಲೆಗಾಗಿ ತಹಶೀಲ್ದಾರರಿಗೆ ಸೂಚನೆ I ಪಲ್ಲವಿ ಜಿ I

I ಅಲೆಮಾರಿ ಜನಾಂಗಕ್ಕೆ ವಸತಿ-ಸರ್ಕಾರಿ ಸೌಲಭ್ಯ ಒದಗಿಸಲು I ಅಗತ್ಯವಾದ ದಾಖಲೆಗಾಗಿ ತಹಶೀಲ್ದಾರರಿಗೆ ಸೂಚನೆ I ಪಲ್ಲವಿ ಜಿ I

ಶಿವಮೊಗ್ಗ, : ಅಲೆಮಾರಿ ಜನಾಂಗದವರು ವಸತಿ ಮತ್ತು ಸರ್ಕಾರಿ ಸೌಲಭ್ಯ ಪಡೆಯಲು ಬೇಕಾಗಿರುವ ಜಾತಿ ಪ್ರಮಾಣ ಪತ್ರ, ಇತರೆ ಪೂರಕ ದಾಖಲೆಗಳನ್ನು ಸರಳೀಕರಿಸಿ ನೀಡಲು ಎಲ್ಲಾ ತಾಲ್ಲೂಕು ತಹಶೀಲ್ದಾರರಿಗೆ ನಿರ್ದೇಶನ ನೀಡಲಾಗಿದೆ ಎಂದು ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದ ಅಧ್ಯಕ್ಷೆ ಪಲ್ಲವಿ ಜಿ ತಿಳಿಸಿದರು.

ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಲಾಗಿದ್ದ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಲೆಮಾರಿ ಅಭಿವೃದ್ದಿ ನಿಗಮದಿಂದ ಜಾರಿಯಾದ ವಿವಿಧ ಯೋಜನೆಗಳ ಪ್ರಗತಿ ಪರಿಶೀಲನೆ ಮತ್ತು ಸಮಾಲೋಚನಾ ಸಭೆಯ ನಂತರ ಪತ್ರಿಕಾಗೋಷ್ಟಿಯನ್ನುದ್ದೇಶಿಸಿ ಅವರು ಮಾತನಾಡಿದರು. ಈಗಾಗಲೇ 21 ಜಿಲ್ಲೆಗಳನ್ನು ತಾಲ್ಲೂಕುವಾರು ಪ್ರವಾಸ ಕೈಗೊಂಡು, ಅಲೆಮಾರಿ ಜನಾಂಗದ ಸ್ಥಿತಿಗತಿಗಳನ್ನು ಪರಿಶೀಲಿಸುತ್ತಿದ್ದೇನೆ. ಟೆಂಟ್, ಜೋಪಡಿ ಮತ್ತು ಅವರು ವಾಸ ಮಾಡುತ್ತಿರುವ ಪ್ರದೇಶಗಳಿಗೆ ಖುದ್ದು ಭೇಟಿ ನೀಡಿ, ವಸತಿ, ಶಿಕ್ಷಣ, ಸರ್ಕಾರಿ ಸೌಲಭ್ಯ ಒದಗಿಸುವ ನಿಟ್ಟಿನಲ್ಲಿ ಅಧಿಕಾರಿಗಳಿಗೆ ಸೂಕ್ತ ನಿರ್ದೇಶನ ನೀಡಿದ್ದೇನೆ.

ರಾಜ್ಯದಲ್ಲಿ 11 ಲಕ್ಷ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡ ಅಲೆಮಾರಿ ಸಮುದಾಯವಿದ್ದು ಜಿಲ್ಲೆಯಲ್ಲಿ 20,084 ಪ.ಜಾ ಮತ್ತು 2728 ಪ.ಪಂ ದ ಜನಸಂಖ್ಯೆ ಇದೆ. 2026 ರ ಬಜೆಟ್‌ನಲ್ಲಿ ಅಲೆಮಾರಿ ಜನಾಂಗದ ಅಭಿವೃದ್ದಿಗಾಗಿ ರೂ.100 ಕೋಟಿ ವಿಶೇಷ ಅನುದಾನ ಹಾಗೂ ಈ ಜನಾಂಗದ ಮಕ್ಕಳು ಶೈಕ್ಷಣಿಕವಾಗಿ ಮುಂದೆ ಬರಲು 4 ವಸತಿ ನಿಲಯಗಳನ್ನು ಘೋಷಣೆ ಮಾಡಲಾಗಿದೆ.

ಶಿವಮೊಗ್ಗ ತಾಲ್ಲೂಕಿನ ಗೋಂದಿ ಚಟ್ನಹಳ್ಳಿ, ಕಲ್ಲಾಪುರ, ಮಲ್ಲಿಗೇನಹಳ್ಳಿ, ನಗರದ ಎಂಆರ್‌ಎಸ್ ಭಾಗದಲ್ಲಿ ವಾಸವಾಗಿರುವ ಸುಡುಗಾಡು ಸಿದ್ದ, ಹಂದಿಜೋಗಿ, ಗೋಸಂಗಿ, ಶಿಳ್ಳೇಕ್ಯಾತ, ಕೊರಚ ಇತರೆ ಅಲೆಮಾರಿ ಜನಾಂಗದವರು ವಾಸವಾಗಿರುವ ಪ್ರದೇಶಗಳಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಅವರು ಶಾಶ್ವತವಾಗಿ ನೆಲೆ ನಿಲ್ಲಲು ವಸತಿ, ನಿವೇಶನ ಕೊಡಿಸುವ ಬಗ್ಗೆ, ಸರ್ಕಾರದ ಸೌಲಭ್ಯಗಳನ್ನು ಒದಗಿಸುವ ಬಗ್ಗೆ ಕ್ರಮ ವಹಿಸಲಾಗುತ್ತಿದೆ.

ಸಮಾಜ ಕಲ್ಯಾಣ ಇಲಾಖೆ, ಕಂದಾಯ ಇಲಾಖೆ, ಗ್ರಾಮೀಣಾಭಿವೃದ್ದಿ ಇಲಾಖೆ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ, ಕಾರ್ಮಿಕ ಇಲಾಖೆ ಸೇರಿದಂತೆ ವಿವಿಧ ಇಲಾಖೆಗಳು ಅಲೆಮಾರಿ ಜನಾಂಗದವರಿಗೆ ಶಾಶ್ವತ ನೆಲೆ ಒದಗಿಸಲು ಹಾಗೂ ಅವರ ಇತರೆ ಸಮಸ್ಯೆಗಳ ನಿವಾರಣೆ ಕುರಿತು ಸಭೆಯಲ್ಲಿ ನಿರ್ಣಯ ಕೈಗೊಳ್ಳಲಾಗಿದೆ.

ತೀರ್ಥಹಳ್ಳಿಯಲ್ಲಿ ದೊಂಬರು, ಸುಡುಗಾಡು ಸಿದ್ದರು ಹೊಳೆದಂಡೆಯಲ್ಲಿ ನೆಲೆಸುತ್ತಿದ್ದು ರಾಜೀವ್ ಗಾಂಧಿ ವಸತಿ ನಿಗಮದಿಂದ ಅವರಿಗೆ ವಸತಿ ಮಂಜೂರು ಮಾಡಲಾಗಿದೆ. ಶೀಘ್ರದಲ್ಲೇ ಹಕ್ಕುಪತ್ರಗಳನ್ನು ವಿತರಣೆ ಮಾಡಲಾಗುವುದು ಎಂದು ತಿಳಿಸಿದರು. ಭದ್ರಾವತಿಯಲ್ಲಿ ಅತಿವೃಷ್ಟಿಯಿಂದ ಶಿಳ್ಳೇಕ್ಯಾತರು ವಾಸವಾಗಿದ್ದ ಟೆಂಟ್ ಬಿದ್ದು ಹೋಗಿ, ಗಂಗಮ್ಮ ಮತ್ತು ಹನುಮಂತಪ್ಪನವರ ಮಗಳು ಮರಣ ಹೊಂದಿದ್ದು, ಇನ್ನೂ ಪರಿಹಾರ ದೊರೆತಿಲ್ಲ. ಪರಿಹಾರ ನೀಡಲು ಜಿಲ್ಲಾಧಿಕಾರಿಗಳು ಶೀಘ್ರವೇ ಕ್ರಮ ವಹಿಸುವುದಾಗಿ ತಿಳಿಸಿದ್ದಾರೆ.

ದಾಖಲೆ ಒದಗಿಸಲು ತಹಶೀಲ್ದಾರರಿಗೆ ಸೂಚನೆ : ಅಲೆಮಾರಿ ಜನಾಂಗಗಳಿಗೆ ಯಾವುದೇ ರೀತಿಯ ಸರ್ಕಾರಿ ಸೌಲಭ್ಯಗಳನ್ನು ನೀಡಬೇಕಾದರೆ ಮುಖ್ಯವಾಗಿ ದಾಖಲೆಗಳು ಬೇಕು. ಆಧಾರ್, ಜಾತಿ ಪ್ರಮಾಣ ಪತ್ರಗಳು ಬಹು ಮುಖ್ಯವಾಗಿ ಬೇಕಾಗಿದ್ದು, ಎಲ್ಲ ತಾಲ್ಲೂಕುಗಳ ತಹಶೀಲ್ದಾರರಿಗೆ ವಿಶೇಷ ಶಿಬಿರ ಮಾಡಿ ಜಾತಿ ಪ್ರಮಾಣ ಪತ್ರ ನೀಡುವಂತೆ ಹಾಗೂ ಸ್ಥಾನಿಕ ಚೌಕಾಸಿ ಮಾಡಿ ಜಾತಿ ಪ್ರಮಾಣ ಪತ್ರ ಒದಗಿಸಲು ಸೂಚಿಸಲಾಗಿದೆ.
ರಾಜ್ಯದಲ್ಲಿ ವಸತಿರಹಿತ ಅಲೆಮಾರಿಗಳಿಗೆ 3200 ಮನೆ ನೀಡುವ ಅವಕಾಶ ನಿಗಮಕ್ಕಿದ್ದು, ಜಿಲ್ಲೆಗಳಿಂದ ಬೇಡಿಕೆ ಬರಬೇಕಿದೆ. ಸಮರ್ಪಕ ದಾಖಲಾತಿಗಳಿಲ್ಲದ ಕಾರಣ ಬೇಡಿಕೆ ಕಡಿಮೆ ಇದ್ದು ವಸತಿ ಸೌಲಭ್ಯ ನೀಡಲಾಗುತ್ತಿಲ್ಲ. ಆದ್ದರಿಂದ ಎಲ್ಲ ತಾಲ್ಲೂಕು ಅಧಿಕಾರಿಗಳು ಇಚ್ಚಾಶಕ್ತಿಯಿಂದ ಕೆಲಸ ಮಾಡಿ ಇವರಿಗೆ ಅನುಕೂಲ ಮಾಡಿಕೊಡಬೇಕೆಂದರು.

ಶಿಕಾರಿಪುರ ತಾಲ್ಲೂಕಿನಲ್ಲಿ ಶಿಳ್ಳೇಕ್ಯಾತರು, ಹಂದಿಗೊಲ್ಲರು, ದೊಂಬರ ಜನಾಂಗದವರ ನಿವೇಶನಕ್ಕೆ ಸಂಬAಧಿಸಿದAತೆ ಸಮಸ್ಯೆಗಳಿವೆ. ಸಾಗರ ಮತ್ತು ಸೊರಬ ತಾಲ್ಲೂಕಿನಲ್ಲಿ ಕೊರಚ, ಶಿಳ್ಳೇಕ್ಯಾತರ ಜಾತಿಪ್ರಮಾಣ ಪತ್ರ ಮತ್ತು ಆಧಾರ್ ಪಡೆಯುವಲ್ಲಿ ಸಮಸ್ಯೆ ಇದ್ದು, ತಹಶೀಲ್ದಾರರು ಈ ದಾಖಲಾತಿ ನೀಡುವಲ್ಲಿ ಅನುಕೂಲ ಮಾಡಿಕೊಟ್ಟಿದ್ದಾರೆ. ಶಿವಮೊಗ್ಗದಲ್ಲಿಯೂ ಜಾತಿ ಪ್ರಮಾಣ ಪತ್ರ ಒದಗಿಸುವ ಕೆಲಸ ಪ್ರಗತಿಯಲ್ಲಿದೆ ಎಂದರು
ನಿವೇಶನ ರಹಿತರ ಪಟ್ಟಿ ನೀಡಲು ಸೂಚನೆ : ಅಲೆಮಾರಿ ಜನಾಂಗದವರಿಗೆ ವಸತಿ ಸೌಲಭ್ಯ ನೀಡುವ ಸಲುವಾಗಿ ಇನ್ನು ಒಂದು ವಾರದೊಳಗೆ ವಸತಿರಹಿತರ ಮಾಹಿತಿ ನೀಡುವಂತೆ ಸಮಾಜ ಕಲ್ಯಾಣ ಇಲಾಖೆ ಹಾಗೂ ಸಂಬAಧಿಸಿದ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ.

ನಿಗಮದಿಂದ ನೀಡಲಾಗುವ ಸೌಲಭ್ಯಗಳ ಕುರಿತು ಅಲೆಮಾರಿ ಜನಾಂಗದವರಿಗೆ ಅಷ್ಟಾಗಿ ಜ್ಞಾನ ಇಲ್ಲವಾಗಿದ್ದು, ಕಾಲ ಕಾಲಕ್ಕೆ ಇವರು ಇರುವ ಸ್ಥಳಗಳಲ್ಲಿ ಅರಿವು ಮೂಡಿಸುವ ಕಾರ್ಯಕ್ರಮ ಮಾಡಲು ನಿಗಮದಿಂದ ವಿಶೇಷ ಅನುದಾನ ನೀಡಲಾಗುತ್ತಿದ್ದು, ಸಮಾಜ ಕಲ್ಯಾಣ ಇಲಾಖೆಗೆ ಮಾಹಿತಿ ಶಿಕ್ಷಣ ಸಂಹವಹ ಚಟುವಟಿಕೆ ಕೈಗೊಳ್ಳಲು ಸೂಚಿಸಲಾಗಿದೆ ಎಂದರು.
ಪತ್ರಿಕಾಗೋಷ್ಟಿಯಲ್ಲಿ ಜಿಲ್ಲಾಧಿಕಾರಿಗಳಾದ ಪ್ರಭುಲಿಂಗ ಕವಳಿಕಟ್ಟಿ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ರಮೇಶ್ ಕುಮಾರ್, ಸಮಾಜ ಕಲ್ಯಾಣ ಇಲಾಖೆಯ ಉಪ ನಿರ್ದೇಶಕ ಮಲ್ಲೇಶಪ್ಪ ಡಿ, ನಿಗದಮ ಸದಸ್ಯರು, ನಿಗದಮ ಕೋಆರ್ಡಿನೇಟರ್ ಆನಂದಕುಮಾರ್ ಹಾಜರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I