Monday, August 3, 2026
Homeಸೂರ್ಯಗಗನI ಎ.ಟಿ‌.ಎನ್.ಸಿ.ಸಿ, ಕಮಲಾ ನೆಹರು ಕಾಲೇಜಿನ ವಿದ್ಯಾರ್ಥಿಗಳಿಂದ I ಜಿಲ್ಲಾಧಿಕಾರಿಗಳಿಗೆ ಮನವಿ I

I ಎ.ಟಿ‌.ಎನ್.ಸಿ.ಸಿ, ಕಮಲಾ ನೆಹರು ಕಾಲೇಜಿನ ವಿದ್ಯಾರ್ಥಿಗಳಿಂದ I ಜಿಲ್ಲಾಧಿಕಾರಿಗಳಿಗೆ ಮನವಿ I

I ಎ.ಟಿ.ಎನ್.ಸಿ.ಸಿ, ಕಮಲಾ ನೆಹರು ಕಾಲೇಜಿನ ವಿದ್ಯಾರ್ಥಿಗಳಿಂದ I ಜಿಲ್ಲಾಧಿಕಾರಿಗಳಿಗೆ ಮನವಿ I

ಶಿವಮೊಗ್ಗ: ಇತ್ತೀಚಿನ ಜಾಗತಿಕ ಪರಿಸ್ಥಿತಿಯಲ್ಲಿ ವಿವಿಧ ದೇಶಗಳ ನಡುವೆ ಉಂಟಾಗುತ್ತಿರುವ ಯುದ್ಧ ಮತ್ತು ಸಂಘರ್ಷಗಳು ಮಾನವಕುಲಕ್ಕೆ ಮಾರಕವಾಗಿದ್ದು, ಯುದ್ಧವನ್ನು ತಪ್ಪಿಸಿ ಶಾಂತಿಯ ಮಾರ್ಗವನ್ನು ಅನುಸರಿಸೋಣ ಎಂದು ನಗರದ ಆಚಾರ್ಯ ತುಳಸಿ ರಾಷ್ಟ್ರೀಯ ವಾಣಿಜ್ಯ ಕಾಲೇಜು ಹಾಗೂ ಕಮಲಾ ನೆಹರು ರಾಷ್ಟ್ರೀಯ ಮಹಿಳಾ ಕಾಲೇಜಿನ ವಿದ್ಯಾರ್ಥಿಗಳು ಗುರುವಾರ ಸಂಜೆ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ಯುದ್ದವೆಂಬುದು ಮಾನವ ಲೋಕದ ಮಾಯದ ಗಾಯ. ಸಾವಿರಾರು ನಿರಪರಾಧಿ ಪ್ರಾಣಗಳು ಜೀವವನ್ನು ಕಳೆದುಕೊಳ್ಳುತ್ತಿದ್ದಾರೆ. ಮನೆಗಳು, ಮೂಲಸೌಕರ್ಯಗಳು, ಪ್ರಕೃತಿ ಸಂಪತ್ತು ಸಂಪೂರ್ಣವಾಗಿ ನಾಶವಾಗುತ್ತಿವೆ. ದೇಶಗಳ ಆರ್ಥಿಕ ಸ್ಥಿತಿ ಕುಸಿಯುತ್ತಿದೆ ಮತ್ತು ಸಮಾಜದಲ್ಲಿ ಅಶಾಂತಿ ವಾತಾವರಣ ನಿರ್ಮಾಣವಾಗುತ್ತದೆ.

ಈ ಹಿನ್ನಲೆಯಲ್ಲಿ ಶಾಂತಿಯ ಮಹತ್ವವನ್ನು ಅರಿತು, ಸಮಸ್ಯೆಗಳನ್ನು ಹಿಂಸೆಯಿಂದಲ್ಲ, ಸ್ನೇಹ ಭಾವದಿಂದ ಪರಿಹರಿಸಬೇಕು. ರಾಷ್ಟ್ರಗಳು ಪರಸ್ಪರ ಸಹಕಾರ, ಸಹಬಾಳ್ವೆ ಮತ್ತು ಪರಸ್ಪರ ಗೌರವದ ಮೌಲ್ಯಗಳನ್ನು ಅಳವಡಿಸಿಕೊಳ್ಳಬೇಕು. ಶಿಕ್ಷಣವು ನಮ್ಮಲ್ಲಿ ಶಾಂತಿ, ಸೌಹಾರ್ದತೆಯನ್ನು ಕಲಿಸಿದ್ದು, ಯುದ್ಧವು ಸಮಸ್ಯೆಗಳ ಪರಿಹಾರವಲ್ಲ; ಶಾಂತಿಯೇ ಶಾಶ್ವತ ಪರಿಹಾರ ಎಂದು ವಿದ್ಯಾರ್ಥಿಗಳು ಕರೆ ನೀಡಿದ್ದಾರೆ.

ಉಪನ್ಯಾಸಕರಾದ ಪ್ರವೀಣ್, ಶ್ರೀಲಲಿತಾ, ಸ್ಮೀತಾ ರೂಪೇಶ್, ನಕ್ಷಾ, ಸೌಪರ್ಣಿಕಾ, ಗಾಯತ್ರಿ, ರಾಘವೇಂದ್ರ, ರಶ್ಮೀ, ಭಾರತಿ ದಯಾನಂದ, ಡಾ.ಬಸವಾರಾಜ್, ಮಂಜು.ಎಸ್ ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I