Sunday, August 2, 2026
Homeಸೂರ್ಯಗಗನI ಕೆಯುಡಬ್ಲ್ಯೂಜೆ ರಾಜ್ಯ ಕಾರ್ಯಕಾರಿ ಸಮಿತಿ ನಿರ್ದೇಶಕರಾಗಿ I ಎನ್. ರವಿಕುಮಾರ್ ನೇಮಕ I

I ಕೆಯುಡಬ್ಲ್ಯೂಜೆ ರಾಜ್ಯ ಕಾರ್ಯಕಾರಿ ಸಮಿತಿ ನಿರ್ದೇಶಕರಾಗಿ I ಎನ್. ರವಿಕುಮಾರ್ ನೇಮಕ I

I ಕೆಯುಡಬ್ಲ್ಯೂಜೆ ರಾಜ್ಯ ಕಾರ್ಯಕಾರಿ ಸಮಿತಿ ನಿರ್ದೇಶಕರಾಗಿ I ಎನ್. ರವಿಕುಮಾರ್ ನೇಮಕ I
ಬೀದರ್ : ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ರಾಜ್ಯ ಸಮಿತಿ ನಿರ್ದೇಶಕರಾಗಿ ಹಿರಿಯ ಪತ್ರಕರ್ತ,  ಶಿವಮೊಗ್ಗ ಟೆಲೆಕ್ಸ್ ಪತ್ರಿಕೆ ಸಂಪಾದಕರಾದ ಎನ್.ರವಿಕುಮಾರ್ ನೇಮಕ ಗೊಂಡಿದ್ದಾರೆ.
ಏ. ೧೨ರಂದು ಬೀದರ್ ನ ೪೦ನೇ ರಾಜ್ಯ ಸಮ್ಮೇಳನದ ಸಂದರ್ಭದಲ್ಲಿ ನಡೆದ ಕಾರ್ಯಕಾರಿ, ನಂತರ ನಡೆದ ಸರ್ವಸದಸ್ಯರ ಸಭೆಯಲ್ಲಿ ಈ ವಿಷಯವನ್ನು ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರ್ ಘೋಷಿಸಿದ್ದಾರೆ. ರವಿಕುಮಾರ್‌ರವರು ಈ ಹಿಂದೆ ಸಂಘದ ಜಿಲ್ಲಾ ಶಾಖೆಯ ಅಧ್ಯಕ್ಷರಾಗಿ, ಪ್ರಧಾನ ಕಾರ್ಯದರ್ಶಿಯಾಗಿ, ರಾಜ್ಯ ಸಮಿತಿ ಸದಸ್ಯರಾಗಿ ಸೇವೆ ಸಲ್ಲಿಸಿದ್ದರಲ್ಲದೇ ಇತ್ತೀಚೆಗೆ ಸಂಘ ರಾಜ್ಯ ಚುನಾವಣಾಕಾರಿಯಾಗಿಯೂ ಸಮರ್ಥವಾಗಿ ಕಾರ್ಯ ನಿರ್ವಹಿಸಿದ್ದರು.
‘ಅಭಿನಂದನೆ’ ನೂತನವಾಗಿ ರಾಜ್ಯಸಮಿತಿ ಸದಸ್ಯಯರಾಗಿ ನೇಮಕ ಗೊಂಡ ಎನ್. ರವಿಕುಮಾರ್‌ರವರನ್ನು, ಕರ್ನಾಟಕ ಕಾರ್ಯನಿರತ ಪತ್ರಕರ್ತ ಸಂಘದ ಜಿಲ್ಲಾ ಶಾಖೆ ಅಧ್ಯಕ್ಷ ವೈದ್ಯನಾಥ್, ರಾಜ್ಯ ಸಮಿತಿ ನಿರ್ದೇಶಕ ಕೆ. ವಿ. ಶಿವಕುಮಾರ್, ಪ್ರಧಾನ ಕಾರ್ಯದರ್ಶಿ ಆರ್. ಎಸ್. ಹಾಲಸ್ವಾಮಿ, ಕಾರ್ಯಕಾರಿ ಪದಾಽಕಾರಿಗಳು, ಸಮಿತಿ ಸದಸ್ಯರು, ಅಭಿನಂದಿಸಿದ್ದಾರೆ.
‘ಸನ್ಮಾನ’ ಏಪ್ರಿಲ್ ೧೨ ರಂದು ಬೀದರ್ ನಲ್ಲಿ ನಡೆದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ  ೪೦  ನೇ ರಾಜ್ಯ ಸಮ್ಮೇಳನದಲ್ಲಿ   ಸಂಘದ ರಾಜ್ಯ ಅಧ್ಯಕ್ಷರಾದ ಶಿವಾನಂದ ತಗಡೂರು ,ಉಪಾಧ್ಯಕ್ಷರಾದ ಮದನ್ ಗೌಡ, ಬೀದರ್ ಜಿಲ್ಲಾಧ್ಯಕ್ಷ ಆನಂದ ದೇವಪ್ಪ , ಪತ್ರಕರ್ತ ಅಪ್ಪರಾವ್ ಸೌದಿ ಅವರು ನೂತನ ನಿರ್ದೇಶಕರಾಗಿ ನೇಮಕಗೊಂಡ ಎನ್.ರವಿಕುಮಾರ್ ಅವರನ್ನು  ಸನ್ಮಾನಿಸಿದರು.
ಕರ್ನಾಟಕ ಕಾರ್ಯನಿರತ ಪತ್ರಕರ್ತ ರ ಸಂಘ, 40 ನೇ ರಾಜ್ಯ ಸಮ್ಮೇಳನಕ್ಕೆ ಅದ್ದೂರಿ ತೆರೆ 
 ಬೀದರ್‌ನ ಝೀರಾ ಕನ್ವೆನ್ಸನ್ ಹಾಲ್‌ನಲ್ಲಿ ಕಳೆದ ಎರಡು ದಿನಗಳಿಂದ ಜರುಗಿದ ಕರ್ನಾಟಕ ಕಾರ್ಯನಿರತ ಪತ್ರಕರ್ತರ ೪೦ನೇ ಸಮ್ಮೇಳನವು ಅತ್ಯಂತ ಯಶಸ್ವಿಯಾಗಿ ಮುಕ್ತಾಯಗೊಂಡಿತು. ಸಮಾಜದ ಅಂಕುಡೊಂಕುಗಳನ್ನು ತಿದ್ದುವ ಪತ್ರಕರ್ತರ ಜವಾಬ್ದಾರಿ ಹಾಗೂ ಮಾಧ್ಯಮಗಳ ಪ್ರಸ್ತುತ ಸ್ಥಿತಿಗತಿಗಳ ಕುರಿತ ಗಂಭೀರ ಚರ್ಚೆಗಳಿಗೆ ಈ ಸಮ್ಮೇಳನ ಸಾಕ್ಷಿಯಾಯಿತು. ಸಮ್ಮೇಳನದ ಮೊದಲ ದಿನ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ದೀಪ ಬೆಳಗುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದ್ದರು.

ಎರಡನೇ ದಿನ ವಿವಿಧ ವಿಷಯಾಧಾರಿತ ಗೋಷ್ಠಿಗಳು ನಡೆದವು. ಸಮಾರೋಪ ಸಮಾರಂಭದಲ್ಲಿ ವಿಧಾನ ಸಭಾಧ್ಯಕ್ಷ ಯು.ಟಿ. ಖಾದರ್ ಮಾತನಾಡಿ, ದೇಶ ಮತ್ತು ಸಮಾಜವನ್ನು ಕಟ್ಟುವಲ್ಲಿ ಪತ್ರಕರ್ತರ ಪಾತ್ರ ಅನನ್ಯ. ಲೇಖನಿ ಎಂಬುದು ಕೇವಲ ಶಬ್ದಗಳನ್ನಲ್ಲ, ಸತ್ಯವನ್ನು ಬರೆಯುವ ಶಕ್ತಿಯಾಗಬೇಕು ಎಂದು ಕಿವಿಮಾತು ಹೇಳಿದರು.
         ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದ ವಿಧಾನಸಭೆ ಪ್ರತಿಪಕ್ಷ ನಾಯಕ ಆರ್. ಅಶೋಕ ಮಾತನಾಡಿ, ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳು ಪ್ರತಿಪಕ್ಷದಂತೆ ಕೆಲಸ ಮಾಡಬೇಕು. ಪತ್ರಕರ್ತರು ಭಯವಿಲ್ಲದೆ ವೃತ್ತಿ ನಿರ್ವಹಿಸಿದಾಗ ಮಾತ್ರ ಪತ್ರಿಕೋದ್ಯಮದ ಘನತೆ ಹೆಚ್ಚುತ್ತದೆ. ಮಾಧ್ಯಮಗಳ ಮೇಲೆ ನಿರ್ಬಂಧ ಹೇರುವುದು ಎಂದರೆ ಜನರ ಅಭಿವ್ಯಕ್ತಿ ಸ್ವಾತಂತ್ರ್ಯವನ್ನು ಹತ್ತಿಕ್ಕಿದಂತೆ ಎಂದು ಅಭಿಪ್ರಾಯಪಟ್ಟರು. ಬೀದರ್ ಜಿಲ್ಲಾ ಉಸ್ತುವಾರಿ ಸಚಿವ ಈಶ್ವರ ಖಂಡ್ರೆ ಮಾತನಾಡಿ, ೩೭೧ಜೆ ಸಾಂವಿಧಾನಿಕ ತಿದ್ದುಪಡಿಯಿಂದ ಕಲ್ಯಾಣ ಕರ್ನಾಟಕ ಭಾಗ ಇಂದು ಪ್ರಗತಿಯತ್ತ ಸಾಗುತ್ತಿದೆ. ಈ ಭಾಗದ ಸರ್ವಾಂಗೀಣ ಅಭಿವೃದ್ಧಿಗೆ ಮಾಧ್ಯಮಗಳು ಪೂರಕ ಸಲಹೆಗಳನ್ನು ನೀಡಬೇಕು ಎಂದು ಮನವಿ ಮಾಡಿದರು.
ಮಾಜಿ ಸಚಿವ ಬಂಡೆಪ್ಪ ಕಾಶಂಪುರ ಅವರು ಇಂದಿನ ಸವಾಲಿನ ದಿನಗಳಲ್ಲಿ ಸರ್ಕಾರ ಪತ್ರಕರ್ತರ ನೆರವಿಗೆ ಧಾವಿಸಬೇಕು ಎಂದು ಒತ್ತಾಯಿಸಿದರು. ಸಮ್ಮೇಳನದ ಸಮಾರೋಪದಲ್ಲಿ ವಿವಿಧ ಕ್ಷೇತ್ರಗಳಲ್ಲಿ ಗಣನೀಯ ಸೇವೆ ಸಲ್ಲಿಸಿದ ೪೦ ಪತ್ರಕರ್ತರಿಗೆ ದತ್ತಿನಿಧಿ ವಾರ್ಷಿಕ ಹಾಗೂ ವಿಶೇಷ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು.
ಶಿವಮೊಗ್ಗದ ಮೂವರಿಗೆ ಪ್ರಶಸ್ತಿ ಪ್ರದಾನ :
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ೪೦ನೇ ರಾಜ್ಯ ಸಮ್ಮೇಳನದಲ್ಲಿ ಶಿವಮೊಗ್ಗೆಯ ಪತ್ರಕರ್ತರಾದ ಮಹೇಶ್ ಹೆಗ್ಡೆ, ಶರತ್‌ಕುಮಾರ್ ಹಾಗೂ ಅರುಣ್ ಕುಮಾರ್‌ರವರನ್ನು ವಿವಿಧ ದತ್ತಿ ಪ್ರಶಸ್ತಿಗಳನ್ನು ನೀಡಿ ಗೌರವಿಸಲಾಯಿತು. ಜಿಲ್ಲಾ ಶಾಖೆಯ ಅಧ್ಯಕ್ಷರಾದ ಹೆಚ್. ಯು. ವೈದ್ಯನಾಥ್, ಉಪಾಧ್ಯಕ್ಷರಾದ ದೇಶಾದ್ರಿ ಹೊಸ್ಮನಿ, ನೂತನ ರಾಜ್ಯಸಮಿತಿ ಸದಸ್ಯ ಎನ್. ರವಿಕುಮಾರ್, ಖಜಾಂಚಿ ಎಸ್. ಆರ್. ರೋಹಿತ್, ನಗರ ಕಾರ್ಯದರ್ಶಿ ಕೆ. ಆರ್. ಸೋಮನಾಥ್, ನಿರ್ದೇಶಕರಾದ ಎಸ್. ಆರ್. ರಂಜಿತ್, ಆರುಂಡಿ ಶ್ರೀನಿವಾಸ ಮೂರ್ತಿ ಹಾಗೂ ಪತ್ರಕರ್ತ ನಾಗೇಶ್ ನಾಯ್ಕ ಉಪಸ್ಥಿತರಿದ್ದರು.
RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I I ಆ.05 ರಂದು ಮಾನ್ಸೂನ್ ಮಾರಾಟ ಮೇಳ ಆಯೋಜನೆ I I ವಿವಿಧ ಗ್ರಾಮಗಳಿಗೆ ಭೇಟಿ ನೀಡಿದ ಶಾಸಕಿ ಶಾರದಾ ಪೂರ್ಯನಾಯ್ಕ್ I ಬರ ಪರಿಸ್ಥಿತಿ ಪರಿಶೀಲನೆ I  I ತಮಿಳುನಾಡಿಗೆ ಕಾವೇರಿ ನದಿ ನೀರು‌ I ಹರಿಸುವ ಆದೇಶ ಅವೈಜ್ಞಾನಿಕ ಹಾಗೂ ರೈತ ವಿರೋದಿಯಾಗಿದೆ I ಕರವೇ ಕಿರಣ್ I I ಪಶುವೈದ್ಯಾಧಿಕಾರಿಗಳ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಗೆ ತಾತ್ಕಾಲಿಕ ತಡೆ ಹಾಗೂ ಆಂತರಿಕ ತನಿಖಾ ಉಪಸಮಿತಿ ರಚನೆ I I ಮತದಾರರ ಪಟ್ಟಿಯ ಶುದ್ದಿ ಕಾರ್ಯದಲ್ಲಿ ಸರ್ವರೂ ಪಾಲ್ಗೊಳ್ಳಬೇಕು I ಮತದಾರರ ನೋಂದಣಾಧಿಕಾರಿ ರಂಗಸ್ವಾಮಿ I