September 27, 2026

I ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲರಿಗೆ I ಕೆಯುಡಬ್ಲೂಜೆ ಅಭಿನಂದನೆ ಏ.24ಕ್ಕೆ I

0
shivan
I ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲರಿಗೆ I ಕೆಯುಡಬ್ಲೂಜೆ ಅಭಿನಂದನೆ ಏ.24ಕ್ಕೆ I

ಬೆಂಗಳೂರು: ರಾಜ್ಯ ಸರ್ಕಾರ ಕೊಡ ಮಾಡುವ ಸಂಗೊಳ್ಳಿ ರಾಯಣ್ಣ ಪ್ರತಿಷ್ಠಿತ ಪ್ರಶಸ್ತಿಗೆ ಭಾಜನರಾಗಿರುವ, ಕೆಯುಡಬ್ಲೂಜೆ ಹಿರಿಯ ಸದಸ್ಯರಾದ ಕಾಮ್ರೆಡ್ ಡಾ.ಸಿದ್ಧನಗೌಡ ಪಾಟೀಲ ಅವರಿಗೆ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ (ಕೆಯುಡಬ್ಲೂಜೆ) ಅಭಿನಂದನಾ ಕಾರ್ಯಕ್ರಮ ಏರ್ಪಡಿಸಿದೆ.

ಏ.24ರಂದು ಬೆಳಿಗ್ಗೆ 11.30ಕ್ಕೆ ಕೆ.ಜಿ.ರಸ್ತೆ, ಕಂದಾಯ ಭವನದ 3ನೇ ಮಹಡಿಯಲ್ಲಿರುವ ಕೆಯುಡಬ್ಲೂೃಜೆ ಸಭಾಂಗಣದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಅವರ ಅಧ್ಯಕ್ಷತೆಯಲ್ಲಿ ಕಾರ್ಯಕ್ರಮ ನಡೆಯಲಿದೆ.
ಹಿರಿಯ ಪತ್ರಕರ್ತರು ಮತ್ತು ಮೈಂಡ್ ಪುಲ್ ಮೀಡಿಯಾ ನಿರ್ದೇಶಕರಾದ ಅನಂತ ಚಿನಿವಾರ ಅವರು ಪ್ರಾಸ್ತಾವಿಕವಾಗಿ ಮಾತನಾಡಲಿದ್ದು, ರಾಷ್ಟ್ರಪತಿ ಪ್ರಶಸ್ತಿ ಪುರಸ್ಕೃತ ಸಿನಿಮಾ ನಿರ್ದೇಶಕರಾದ ಕೇಸರಿ ಹರವೂ ಅವರು ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದು ಸಂಘದ ಪ್ರಧಾನ ಕಾರ್ಯದರ್ಶಿ ಜಿ.ಸಿ.ಲೋಕೇಶ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಇದೇ ಸಂದರ್ಭದಲ್ಲಿ ಬೀದರ್ ಸಮ್ಮೇಳನಕ್ಕೆ ಕಾರಣಾಂತರದಿಂದ ಬರಲು ಸಾಧ್ಯವಾಗದೆ ಇದ್ದ ಕೆಯುಡಬ್ಲೂೃಜೆ ಪ್ರಶಸ್ತಿ ಪುರಸ್ಕೃತರನ್ನು ಗೌರವಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
Spread the love

Leave a Reply

Your email address will not be published. Required fields are marked *

error: Content is protected !!