Saturday, 19 September 2026 Suryagagana — Edition

Suryagagana

My WordPress Blog

ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I ಸೂರ್ಯಗಗನ I ಹಸಿರು, ಸ್ವಚ್ಚ ಮತ್ತು ಸುಂದರ ನಗರ ನಿರ್ಮಾಣಕ್ಕೆ ಸಂಕಲ್ಪ I ಸ್ಬೂಡಾ ಅಧ್ಯಕ್ಷ ಹೆಚ್.ಎಸ್.‌ಸುಂದರೇಶ್ I ಸೂರ್ಯಗಗನ I ಕಾರ್ಮಿಕರ ವಸತಿ ನಿಲಯಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸಲು I ರಾಜ್ಯ ಅಸಂಘಟಿತ ಕಾರ್ಮಿಕ ಸಂಘ ಒತ್ತಾಯ I ಸೂರ್ಯಗಗನ I ಪೊಲೀಸ್ ಕಾನ್‌ಸ್ಟೇಬಲ್ ಸ್ಪರ್ಧಾತ್ಮಕ ಪರೀಕ್ಷೆ I ಯಶಸ್ವಿಯಾಗಿ ನಡೆಸಲು I ಅಪರ ಜಿಲ್ಲಾಧಿಕಾರಿ ಅಭಿಷೇಕ್ ವಿ ಸೂಚನೆ I ಸೂರ್ಯಗಗನ I ಅತ್ಯಲ್ಪ ಅವಧಿಯಲ್ಲಿ ರೈಲ್ವೇ ಕ್ಷೇತ್ರದಲ್ಲಿ ಕ್ಷಿಪ್ರಕ್ರಾಂತಿ I ಸಂಸದ ಬಿ.ವೈ.ರಾಘವೇಂದ್ರ I ಸೂರ್ಯಗಗನ I ತೀರ್ಥಹಳ್ಳಿಗೆ ಮುಖ್ಯಮಂತ್ರಿಗಳ ಭೇಟಿ – ಪಕ್ಷಾತೀತ ಕಾರ್ಯಕ್ರಮ I ಆರಗ ಜ್ಞಾನೇಂದ್ರ I ಅಂಕಣ I ಶಿವಮೊಗ್ಗದಲ್ಲಿ I ಲ್ಯಾಂಡ್ ಆಟೋ ಕ್ಯಾಡ್ ಡ್ರಾಯಿಂಗ್ I ದೋಖಾ ಸ್ಕೀಮ್‌ಗಳೂ I ಸೂರ್ಯಗಗನ I ಶರಾವತಿ ನಗರ ಶ್ರೀರಾಮ ಗೆಳೆಯರ ಬಳಗದಿಂದ I ಗಣೇಶೋತ್ಸವ ರಕ್ತದಾನ ಶಿಬಿರ I ಸೂರ್ಯಗಗನ I ರಾಜ್ಯ ಅಫೆಕ್ಸ್ ಬ್ಯಾಂಕಿನ ನೂತನ ಅಧ್ಯಕ್ಷರಿಗೆ I ಅಭಿನಂದನೆ ಸಲ್ಲಿಸಿದ I ಎಂ.ಶ್ರೀಕಾಂತ್ I
ಸೂರ್ಯಗಗನ

I ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಶಾಲಾ ಚುನಾವಣೆ ಸಹಕಾರಿ I ಸಿ.ಕೆ.ಶ್ರೀಧರ್ I

I ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಶಾಲಾ ಚುನಾವಣೆ ಸಹಕಾರಿ I ಸಿ.ಕೆ.ಶ್ರೀಧರ್ I ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಲು ಹಾಗೂ ನಾಯಕತ್ವ ಗುಣಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಶಾಲಾ ಚುನಾವಣೆ ಸಹಕಾರಿ ಎಂದು ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ…
I ನಾಯಕತ್ವ ಗುಣಗಳನ್ನು ಬೆಳೆಸುವಲ್ಲಿ ಶಾಲಾ ಚುನಾವಣೆ ಸಹಕಾರಿ I ಸಿ.ಕೆ.ಶ್ರೀಧರ್ I

ಶಿವಮೊಗ್ಗ: ವಿದ್ಯಾರ್ಥಿಗಳಲ್ಲಿ ಪ್ರಜಾಪ್ರಭುತ್ವದ ಮೌಲ್ಯಗಳನ್ನು ಬೆಳೆಸಲು ಹಾಗೂ ನಾಯಕತ್ವ ಗುಣಗಳನ್ನು ಪ್ರೋತ್ಸಾಹಿಸುವ ದೃಷ್ಟಿಯಿಂದ ಶಾಲಾ ಚುನಾವಣೆ ಸಹಕಾರಿ ಎಂದು ಡಿವಿಎಸ್ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಉಪ ಪ್ರಾಚಾರ್ಯ ಸಿ.ಕೆ.ಶ್ರೀಧರ್ ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ವತಿಯಿಂದ ಶಾಲಾ ಆವರಣದಲ್ಲಿ ಆಯೋಜಿಸಿದ್ದ ಶಾಲಾ ಚುನಾವಣಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಮತದಾನದ ಮಹತ್ವದ ಕುರಿತು ವಿದ್ಯಾರ್ಥಿಗಳಲ್ಲಿ ಅರಿವು ಮೂಡಿಸಲು ಇಂತಹ ಪ್ರಾಯೋಗಿಕ ಚುನಾವಣೆ ಕಾರ್ಯಕ್ರಮಗಳು ನೆರವಾಗುತ್ತದೆ. ಬಾಲ್ಯದಲ್ಲಿಯೇ ಚುನಾವಣಾ ಪ್ರಕ್ರಿಯೆ, ನಾಮಪತ್ರ ಸಲ್ಲಿಕೆ ಮತ್ತು ಆಯ್ಕೆ ಪ್ರಕ್ರಿಯೆ ಬಗ್ಗೆ ಜ್ಞಾನ ದೊರಕುತ್ತದೆ. ಉತ್ತಮ ನಾಯಕನ ಆಯ್ಕೆಯು ಅತ್ಯಂತ ಮಹತ್ವಪೂರ್ಣ ಆಗಿರುತ್ತದೆ ಎಂದು ತಿಳಿಸಿದರು.

ವಿದ್ಯಾರ್ಥಿಗಳಲ್ಲಿ ಜವಾಬ್ದಾರಿ, ಸಂವಹನ ಕೌಶಲ್ಯ, ನಿರ್ಧಾರ ತೆಗೆದುಕೊಳ್ಳುವ ಸಾಮಾರ್ಥ್ಯ ಮತ್ತು ನಾಯಕತ್ವದ ಗುಣಗಳನ್ನು ಪ್ರೋತ್ಸಾಹಿಸುವುದು ಪ್ರಮುಖ ಉದ್ದೇಶವಾಗಿದೆ. ಶಾಲಾಮಟ್ಟದ ಸಾಂಸ್ಕೃತಿಕ ಮತ್ತು ಕ್ರೀಡಾ ಚಟುವಟಿಕೆಗಳನ್ನು ಆಯೋಜಿಸಲು ಹಾಗೂ ಶಿಸ್ತಿನ ಮನೋಭಾವ ಬೆಳೆಸುವಲ್ಲಿ ಇಂತಹ ಕಾರ್ಯಕ್ರಮಗಳು ಸಹಕಾರಿಯಾಗುತ್ತವೆ ಎಂದು ಹೇಳಿದರು.

ದೇಶದ ಚುನಾವಣಾ ವ್ಯವಸ್ಥೆಯ ಬಗ್ಗೆ ಗೌರವ ಮತ್ತು ಸದೃಢ ಭಾರತ ನಿರ್ಮಾಣದಲ್ಲಿ ಮತದಾನದ ಮಹತ್ವದ ಬಗ್ಗೆ ಅರಿವು ಮೂಡುತ್ತದೆ. ವಿದ್ಯಾರ್ಥಿಗಳಿಗೆ ಶಿಕ್ಷಣದ ಜತೆಯಲ್ಲಿ ಸಮಾಜದ ಮಹತ್ತರ ಸಂಗತಿಗಳ ಬಗ್ಗೆ ಜ್ಞಾನ ಹೆಚ್ಚಾಗುತ್ತದೆ ಎಂದು ಹೇಳಿದರು.

ದೇಶೀಯ ವಿದ್ಯಾಶಾಲಾ ಸಮಿತಿಯ ಅಧ್ಯಕ್ಷ ಕೆ.ಬಸಪ್ಪ ಗೌಡ ಹಾಗೂ ಕಾರ್ಯದರ್ಶಿ ಎಸ್.ಪಿ.ದಿನೇಶ್ ಅವರು ವಿದ್ಯಾರ್ಥಿಗಳ ಶಾಲಾ ಚುನಾವಣಾ ಪ್ರಕ್ರಿಯೆಗೆ ಶುಭಕೋರಿದರು. ಎ ಮತ್ತು ಬಿ ತಂಡಗಳಾಗಿ ವಿದ್ಯಾರ್ಥಿಗಳಿಗೆ ಚುನಾವಣಾ ಪ್ರಕ್ರಿಯೆ ನಡೆಸಲಾಯಿತು. ದೇಶೀಯ ವಿದ್ಯಾಶಾಲಾ ಸಮಿತಿಯ ಸಂಯುಕ್ತ ಪದವಿಪೂರ್ವ ಕಾಲೇಜಿನ ಪ್ರೌಢಶಾಲಾ ವಿಭಾಗದ ಎಸ್.ಕೇಶವಪ್ರಸಾದ್, ಆರ್.ಗಾಯಿತ್ರಿ, ಎನ್.ಎಸ್.ಜ್ಯೋತಿ, ಶಿಕ್ಷಕರು ಹಾಗೂ ಸಿಬ್ಬಂದಿ ವರ್ಗ ಹಾಜರಿದ್ದರು.

Gara Srinivas

Gara Srinivas

Leave a comment

error: Content is protected !!