Monday, August 3, 2026
Homeಸೂರ್ಯಗಗನI ಕೆಇಎ ಸ್ಪಷ್ಟನೆ I ಒಎಂಆರ್ ಹಾಗೂ ಪ್ರಶ್ನೆಪತ್ರಿಕೆ ಕ್ರಮಸಂಖ್ಯೆ ಒಂದೇ ಇರುವುದು ಕಡ್ಡಾಯವಲ್ಲ I...

I ಕೆಇಎ ಸ್ಪಷ್ಟನೆ I ಒಎಂಆರ್ ಹಾಗೂ ಪ್ರಶ್ನೆಪತ್ರಿಕೆ ಕ್ರಮಸಂಖ್ಯೆ ಒಂದೇ ಇರುವುದು ಕಡ್ಡಾಯವಲ್ಲ I ಸುಳ್ಳುಸುದ್ದಿ ನಂಬದಂತೆ ಮನವಿ I

I ಕೆಇಎ ಸ್ಪಷ್ಟನೆ I ಒಎಂಆರ್ ಹಾಗೂ ಪ್ರಶ್ನೆಪತ್ರಿಕೆ ಕ್ರಮಸಂಖ್ಯೆ ಒಂದೇ ಇರುವುದು ಕಡ್ಡಾಯವಲ್ಲ I ಸುಳ್ಳುಸುದ್ದಿ ನಂಬದಂತೆ ಮನವಿ I

ಶಿವಮೊಗ್ಗ, :  ಕರ್ನಾಟಕ ಪೊಲೀಸ್ ಇಲಾಖೆಯಲ್ಲಿನ ಸಿವಿಲ್ ಪೊಲೀಸ್ ಕಾನ್‌ಸ್ಟೇಬಲ್ ಹುದ್ದೆಗಳ ನೇಮಕಾತಿಗಾಗಿ ಆಗಸ್ಟ್ 2 ರಂದು ರಾಜ್ಯಾದ್ಯಂತ ನಡೆಸಲಾದ ಲಿಖಿತ ಪರೀಕ್ಷೆಗೆ ಸಂಬಂಧಿಸಿದಂತೆ ಎದ್ದಿರುವ ಗೊಂದಲಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (ಕೆಇಎ) ಅಧಿಕೃತ ಸ್ಪಷ್ಟನೆ ನೀಡಿದೆ.

ಪರೀಕ್ಷೆಯ ಸಮಯದಲ್ಲಿ ವಿತರಿಸಲಾದ ಒಎಂಆರ್ ಶೀಟ್ ಹಾಗೂ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆಗಳು ಒಂದೇ ಆಗಿಲ್ಲ ಎಂಬ ಕಾರಣಕ್ಕೆ ಅಭ್ಯರ್ಥಿಗಳಲ್ಲಿ ಗೊಂದಲ ಸೃಷ್ಟಿಸಿ, ಸಾಮಾಜಿಕ ಜಾಲತಾಣಗಳಲ್ಲಿ ಸುಳ್ಳು ಸುದ್ದಿಗಳನ್ನು ಹರಡಲಾಗುತ್ತಿದೆ ಎಂದು ಪ್ರಾಧಿಕಾರ ತಿಳಿಸಿದೆ.

ಯಾವುದೇ ನಿಯಮವಿಲ್ಲ: ಒಎಂಆರ್ ಶೀಟ್ ಮತ್ತು ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆ ಒಂದೇ ಇರಬೇಕು ಎಂದು ಪ್ರಾಧಿಕಾರವು ತನ್ನ ಯಾವುದೇ ಪ್ರಕಟಣೆ, ಸೂಚನೆ ಅಥವಾ ಮಾಧ್ಯಮಗಳ ಮೂಲಕ ಎಲ್ಲೂ ತಿಳಿಸಿಲ್ಲ.
ಸಾಮಾನ್ಯ ಪ್ರಕ್ರಿಯೆ: ಒಎಂಆರ್ ಉತ್ತರ ಪತ್ರಿಕೆಯಲ್ಲಿ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆ ಹಾಗೂ ಆವೃತ್ತಿ ಕೋಡ್ ಅನ್ನು ಬರೆಯಲು/ತುಂಬಲು ಅವಕಾಶ ನೀಡಲಾಗಿರುತ್ತದೆ. ಒಂದು ವೇಳೆ ಎರಡೂ ಸಂಖ್ಯೆಗಳೂ ಒಂದೇ ಆಗಿರಬೇಕಿದ್ದಲ್ಲಿ, ಒಎಂಆರ್‌ನಲ್ಲಿ ಪ್ರಶ್ನೆಪತ್ರಿಕೆಯ ಕ್ರಮಸಂಖ್ಯೆಯನ್ನು ಬರೆಯುವ ಅಗತ್ಯವೇ ಇರುತ್ತಿರಲಿಲ್ಲ.

ಪರೀಕ್ಷೆಯನ್ನು ಅತ್ಯಂತ ಪಾರದರ್ಶಕವಾಗಿ ನಡೆಸಲಾಗಿದ್ದು, ಅಭ್ಯರ್ಥಿಗಳನ್ನು ತಪ್ಪುದಾರಿಗೆ ಎಳೆಯಲು ಕೆಲವರು ಸಾಮಾಜಿಕ ಮಾಧ್ಯಮಗಳ ಮೂಲಕ ಅಪಪ್ರಚಾರ ಮಾಡುತ್ತಿದ್ದಾರೆ.
ಅಭ್ಯರ್ಥಿಗಳು ಹಾಗೂ ಸಾರ್ವಜನಿಕರು ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಇಂತಹ ಅನಗತ್ಯ ಮತ್ತು ಆಧಾರರಹಿತ ಸುಳ್ಳು ಸುದ್ದಿಗಳನ್ನು ನಂಬಬಾರದು ಹಾಗೂ ಹರಡಬಾರದು ಎಂದು ಕೆಇಎ ಕಾರ್ಯನಿರ್ವಾಹಕ ನಿರ್ದೇಶಕರು ಕೋರಿದ್ದಾರೆ.

RELATED ARTICLES

LEAVE A REPLY

Please enter your comment!
Please enter your name here

Most Popular

Recent Comments

error: Content is protected !!
Latest news
I ಕೆಇಎ ಸ್ಪಷ್ಟನೆ I ಒಎಂಆರ್ ಹಾಗೂ ಪ್ರಶ್ನೆಪತ್ರಿಕೆ ಕ್ರಮಸಂಖ್ಯೆ ಒಂದೇ ಇರುವುದು ಕಡ್ಡಾಯವಲ್ಲ I ಸುಳ್ಳುಸುದ್ದಿ ನಂಬದಂ... I ತೀರ್ಥಹಳ್ಳಿಯಲ್ಲಿ ಮಳೆಯ ಅಬ್ಬರ I ಗುಡ್ಡ ಕುಸಿದು ಮೂವರ ಧಾರುಣ ದುರ್ಮರಣ I I ಗಾರಾ ಎನ್ನುವ ಜೀವಭಾವ I I ಕರೋನಾ ಲಾಕ್‌ಡೌನ್ ಅವಧಿಯ ಭೂ ಒತ್ತುವರಿ ಹಾಗೂ ಅಕ್ರಮ ಮ್ಯೂಟೇಷನ್ I ಕುರಿತು ಉನ್ನತ ಮಟ್ಟದ ತನಿಖೆಗೆ ಹ್ಯೂಮನ್ ರೈಟ್ಸ್... I ಗೋಪಾಳದ ಆದಿ ರಂಗನಾಥ ಸ್ವಾಮಿ ದೇವಳದ I ಜಾಗದ ಮೇಲೆ ಲ್ಯಾಂಡ್ ಪೋರ್ಜರಿಸ್ಟ್ ಗಳ ದಾಳಿ I ಅಧಿಕಾರಿಗಳ ಅತೀವ ಮೌನ I I ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸ್ಥಾನಕ್ಕೆ I ಎ.ಎಚ್.ಸುನೀಲ್ ಅವರಿಂದ ಅರ್ಜಿ ಸಲ್ಲಿಕೆ I I ರೋಟರಿ ಕ್ಲಬ್ ಗಳು ಇತರೇ ಸಂಘಗಳಿಗೆ ಮಾದರಿ I ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ರಾಜ್ಯಾಧ್ಯಕ್ಷ ಸಿ.ಎಸ್.ಷಡಾಕ್ಷರ... I ಸುಮೇರು ರಿಯಾಲಿಟಿ ಪ್ರೈ.ಲಿ ನಿಂದ ರಾಜಕಾಲುವೆ ಒತ್ತುವರಿ‌ I ಕೋರ್ಟ್ ಸಮನ್ಸ್ I ಎಚ್ಚೆತ್ತುಕೊಂಡ ಸರ್ಕಾರ.! I ಎಸ್ ಐ ... I ಶಿವಮೊಗ್ಗದ ಭೂಗಳ್ಳರ ವಿರುದ್ದ ಸಲ್ಲಿಸಲಾಗಿದ್ದ I ಸಂಘಟನೆಗಳ ದೂರುಗಳು ಏನಾಯ್ತು..? I ಶಾಲಾ ಮಕ್ಕಳಲ್ಲಿ ನಾಯಕತ್ವದ ಗುಣ ಬೆಳೆಸಲು I ರೋಟರಿ ಸಂಸ್ಥೆ ಸಹಕಾರಿ I ಶೇಷಗಿರಿ ಡಿ.ಕೆ. I