Tuesday, 3 November 2026 — Suryagagana
05:57 PM
ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ I ಕರವೇ  ಸ್ವಾಭಿಮಾನಿ ಬಣದಿಂದ I 71ನೇ ಕನ್ನಡ ರಾಜ್ಯೋತ್ಸವ ಆಚರಣೆ I ಸೂರ್ಯಗಗನ I ವಿಜೃಂಭಣೆಯ ಕನ್ನಡ ರಾಜ್ಯೋತ್ಸವ I ಭಾಷೆ, ಸಂಸ್ಕೃತಿ ಹಾಗೂ ಸೌಹಾರ್ದತೆಯ ಸಂರಕ್ಷಣೆಗೆ I ಜಿಲ್ಲಾಧಿಕಾರಿಗಳ ಕರೆ I ಸೂರ್ಯಗಗನ I ಭದ್ರಾವತಿಯಲ್ಲಿ ಬೆಳಗಾವಿಯಲ್ಲಿ ನಡೆಯುವ I ಪತ್ರಿಕಾ ವಿತರಕರ ಒಕ್ಕೂಟದ ರಾಜ್ಯ ಸಮ್ಮೇಳನ ಲಾಂಛನ ಬಿಡುಗಡೆ I ಸೂರ್ಯಗಗನ I ನ. 6ರಿಂದ ಹಾಪ್ ಕಾಮ್ಸ್‌ನಲ್ಲಿ I ದೇಶಿ, ವಿದೇಶಿ ಹಣ್ಣುಗಳ ಮಾರಾಟ ಮಳಿಗೆ ಉದ್ಘಾಟನೆ I ಆರ್. ವಿಜಯಕುಮಾರ್ I ಸೂರ್ಯಗಗನ I ಹಾಲಿನ ದರ ಏರಿಕೆ ಸ್ವಾಗತಾರ್ಹ I ಗ್ರಾಹಕರ ಹೊರೆ ಸರ್ಕಾರವೇ ಭರಿಸಲಿ I ನರಸಿಂಹ ಗಂಧದಮನೆ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I
ಸೂರ್ಯಗಗನ

I ರಕ್ತದಾನದಂತಹ ಮಹತ್ಕಾರ್ಯಕ್ಕೆ I ಯುವಜನರು ಕೈಜೋಡಿಸಿ I ಡಾ. ಎಲ್.ಅರವಿಂದ ಕರೆ I

I ರಕ್ತದಾನದಂತಹ ಮಹತ್ಕಾರ್ಯಕ್ಕೆ I ಯುವಜನರು ಕೈಜೋಡಿಸಿ I ಡಾ. ಎಲ್.ಅರವಿಂದ ಕರೆ I ಶಿವಮೊಗ್ಗ : ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು, ರಕ್ತದಾನಕ್ಕಿಂತ ಬೇರೆ ದಾನ ಇನ್ನೊಂದಿಲ್ಲ. ಯುವಜನರು ಈ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು. ಕೇವಲ ಒಂದು ಯುನಿಟ್ ರಕ್ತ ನಾಲ್ಕು…

I ರಕ್ತದಾನದಂತಹ ಮಹತ್ಕಾರ್ಯಕ್ಕೆ I ಯುವಜನರು ಕೈಜೋಡಿಸಿ I ಡಾ. ಎಲ್.ಅರವಿಂದ ಕರೆ I

ಶಿವಮೊಗ್ಗ : ರಕ್ತದಾನಿಗಳು ಸಮಾಜದಲ್ಲಿ ನಿಜವಾದ ಹೀರೋಗಳು, ರಕ್ತದಾನಕ್ಕಿಂತ ಬೇರೆ ದಾನ ಇನ್ನೊಂದಿಲ್ಲ. ಯುವಜನರು ಈ ಮಹತ್ಕಾರ್ಯಕ್ಕೆ ಕೈಜೋಡಿಸಬೇಕು. ಕೇವಲ ಒಂದು ಯುನಿಟ್ ರಕ್ತ ನಾಲ್ಕು ಜನರ ಜೀವವನ್ನು ಉಳಿಸಬಲ್ಲದು, ರಕ್ತವನ್ನು ಕೃತಕವಾಗಿ ತಯಾರಿಸಲು ಇನ್ನೂ ಸಾಧ್ಯವಾಗಿಲ್ಲದ ಕಾರಣ ರಕ್ತಕ್ಕೆ ಬಹಳ ಬೇಡಿಕೆ ಇದೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ.ಎಲ್.ಅರವಿಂದ ಕರೆ ನೀಡಿದರು.

ಇಂದು ಬೆಳಿಗ್ಗೆ ರಾಷ್ಟ್ರೀಯ ಶಿಕ್ಷಣ ಸಮಿತಿಯ ಎಸ್.ಆರ್.ಎನ್.ಎಂ. ಕಾಲೇಜಿನ ಆವರಣದಲ್ಲಿ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನಾ ಘಟಕ ಹಾಗೂ ಯುವ ರೆಡ್ ಕ್ರಾಸ್ ಘಟಕಗಳ ವತಿಯಿಂದ ರೆಡ್ ಕ್ರಾಸ್ ಸಂಜೀವಿನಿ ರಕ್ತನಿಧಿಯ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ರಕ್ತದಾನ ಶಿಬಿರಕ್ಕೆ ಚಾಲನೆ ನೀಡಿ ಮಾತನಾಡಿದ ಅವರು, ನಮ್ಮ ಕಾಲೇಜಿನ ವತಿಯಿಂದ ರಕ್ತದಾನ ಶಿಬಿರ ಹಾಗೂ ರಕ್ತದ ಗುಂಪು ತಪಾಸಣೆ ಸೇರಿದಂತೆ ಅನೇಕ ಸಮಾಜ ಮುಖಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುತ್ತಾ ಬಂದಿದ್ದೇವೆ. ಯುವಜನರು ಈ ಮಹತ್ಕಾರ್ಯಕ್ಕೆ ಹೆಚ್ಚು ಆಸಕ್ತಿಯಿಂದ ಕೈಜೋಡಿಸಬೇಕು ಎಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ಶಿವಮೊಗ್ಗ ಜಿಲ್ಲಾ ವಾಣಿಜ್ಯ ಮತ್ತು ಕೈಗಾರಿಕಾ ಸಂಘದ ಉಪಾಧ್ಯಕ್ಷರಾದ ಜಿ.ವಿಜಯ್ ಕುಮಾರ್ ಮಾತನಾಡಿ, ರಕ್ತದಾನದಿಂದ ಹೃದಯಾಘಾತ ಕಡಿಮೆ ಆಗುವುದರ ಜೊತೆಗೆ ದೇಹದಲ್ಲಿ ರಕ್ತದಾನದಿಂದ ಕೊಬ್ಬಿನಾಂಶ ಹೊರಹೋಗುವುದರಿಂದ ಸದಾ ಲವಲವಿಕೆಯಿಂದ ಇರಲು ಅನುಕೂಲವಾಗುತ್ತದೆ. ಜೊತೆಗೆ ದೀರ್ಘಾಯುಷ್ಯವುಳ್ಳವರಾಗಿರುತ್ತಾರೆ. ಜಿಲ್ಲೆಯಲ್ಲಿ ರಕ್ತದ ಕೊರತೆ ತುಂಬಾ ಹೆಚ್ಚಾಗಿದ್ದು, ಇದನ್ನು ನೀಗಿಸಲು ಯುವಕರು ರಕ್ತದಾನ ಮಾಡುವುದರಲ್ಲಿ ಮುಂದಾಗಬೇಕು. ಮೂಢನಂಬಿಕೆಯಿಂದ ಹೊರ ಬಂದು ರಕ್ತದಾನ ಮಾಡಬೇಕು ಎಂದು ಯುವಜನತೆಗೆ ಕಿವಿ ಮಾತು ಹೇಳಿದರು.

ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳ ರಕ್ತದ ಗುಂಪು ತಪಾಸಣೆ ಹಾಗೂ ರಕ್ತದಾನ ಮಾಡಿದ ದಾನಿಗಳಿಗೆ ಪ್ರಮಾಣಪತ್ರವನ್ನು ವಿತರಿಸಲಾಯಿತು. ಈ ರಕ್ತದಾನ ಶಿಬಿರದಲ್ಲಿ 118ಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿದ ಧರಣೇಂದ್ರ ದಿನಕರ್, ಯುವ ರೆಡ್‍ಕ್ರಾಸ್ ಘಟಕದ ಡಾ. ದಿನಕರ್ ಹಾಗೂ ಎನ್.ಎಸ್.ಎಸ್. ಘಟಕದ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Gara

Gara

Leave a comment

error: Content is protected !!