I ಈದ್ ಮಿಲಾದ್ ಆಚರಣೆ ಪೂರ್ಣಗೊಳ್ಳುವವರೆಗೆ I ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ I ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ I
ಶಿವಮೊಗ್ಗ, : ಜಿಲ್ಲೆಯಲ್ಲಿ ಈದ್ ಮಿಲಾದ್ ಹಬ್ಬದ ಆಚರಣೆ ಮತ್ತು ಮೆರವಣಿಗೆಯ ಹಿನ್ನೆಲೆಯಲ್ಲಿ ಸಾರ್ವಜನಿಕ ಶಾಂತಿ ಹಾಗೂ ಸೌಹಾರ್ದತೆ ಕಾಪಾಡುವ ಉದ್ದೇಶದಿಂದ ಆಗಸ್ಟ್ 25 ರಿಂದ 28 ರವರೆಗೆ ಡಿಜೆ ಸಿಸ್ಟಂ ಬಳಕೆ ನಿಷೇಧಿಸಿ ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿ ಆದೇಶ ಹೊರಡಿಸಿದ್ದಾರೆ.
ಆಗಸ್ಟ್ 26 ರಂದು ಜಿಲ್ಲಾದ್ಯಂತ ಈದ್ ಮಿಲಾದ್ ಹಬ್ಬ ನಡೆಯಲಿದ್ದು, ಸಾರ್ವಜನಿಕರಿಗೆ, ವಿದ್ಯಾರ್ಥಿಗಳಿಗೆ, ವಯಸ್ಕರಿಗೆ, ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುವ ರೋಗಿಗಳಿಗೆ ತೊಂದರೆ ಯಾಗುವುದರೊಂದಿಗೆ ಕಾನೂನು ಸುವ್ಯವಸ್ಥೆಗೆ ಧಕ್ಕೆಯುಂಟಾಗುವ ಸಾಧ್ಯತೆಗಳಿರುತ್ತವೆ.
ಈ ಹಿನ್ನೆಲೆಯಲ್ಲಿ, ಪೊಲೀಸ್ ಅಧೀಕ್ಷಕರ ಶಿಫಾರಸಿನಂತೆ ಮುಂಜಾಗ್ರತಾ ಕ್ರಮವಾಗಿ ಕರ್ನಾಟಕ ಪೊಲೀಸ್ ಕಾಯ್ದೆ-1963 ರ ಕಲಂ 35, 36 ರ ಅಡಿಯಲ್ಲಿ ನೀಡಲಾದ ಅಧಿಕಾರವನ್ನು ಚಲಾಯಿಸಿ, ಜಿಲ್ಲಾದ್ಯಂತ ಆಗಸ್ಟ್ 25 ರಿಂದ ಆಗಸ್ಟ್ 28 ರವರೆಗೆ ಈ ನಿಷೇಧಾಜ್ಞೆ ಜಾರಿಯಲ್ಲಿರಲಿದೆ ಎಂದು ಜಿಲ್ಲಾಡಳಿತ ತಿಳಿಸಿದೆ.