Saturday, 31 October 2026 — Suryagagana
07:21 AM
ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I ಸೂರ್ಯಗಗನ I ಸೇವಾಪತ್ರದ ಹೆಸರಿನಲ್ಲಿ ಕೋಟ್ಯಾಂತರ ರೂ ಲೂಟಿಗೆ ನಿಂತ ಖಾಸಗಿ ಮ್ಯಾನ್‌ಪವರ್ ಏಜೆನ್ಸಿಗಳು I ತನಿಖೆಗೆ ಮುಂದಾಗುವಂತೆ ಪಾಲಿಕೆ ಆಯುಕ್ತರಿಗೆ ಒತ್ತಾಯಿಸಿದ ತೇಜೇಶ್ ರಾಮಚಂದ್ರ I ಸೂರ್ಯಗಗನ      I ಪ್ರತಿ ಮುಗ್ಧ ಮಗುವಿನ ಬಾಲ್ಯವೂ ಅಮೂಲ್ಯ I ನ್ಯಾಯಾಧೀಶ ಮಂಜುನಾಥ ಜಿ.ಎ. I ಸೂರ್ಯಗಗನ I ಜವಳಿ ಉದ್ಯಮದ ಬೆಳವಣಿಗೆಯಿಂದ ಹೆಚ್ಚಿನ ಉದ್ಯೋಗ ಸೃಷ್ಟಿ  I ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆಯ ಜಂಟಿ ನಿರ್ದೇಶಕ ಆರ್. ಗಣೇಶ್ I ಸೂರ್ಯಗಗನ  I ಸಂಘಟನೆಯ ಬಲಿಷ್ಟತೆ ಮೂಲಕ I ಪತ್ರಿಕಾ ವಿತರಕರ ಅಭಿವೃದ್ಧಿಗೆ ಸಲಹೆ I ಸೂರ್ಯಗಗನ I ಕರ್ನಾಟಕ ರಾಜ್ಯ ಪತ್ರಿಕಾ ವಿತರಕರ ಒಕ್ಕೂಟದ I ಶಿವಮೊಗ್ಗ ಜಿಲ್ಲಾಧ್ಯಕ್ಷರಾಗಿ I ಎನ್.ಮಾಲತೇಶ್ ಮರು ಆಯ್ಕೆ I ಸೂರ್ಯಗಗನ I ರಾಮಾಯಣ ಮಹಾಕಾವ್ಯ I ಮಾನವೀಯತೆಯ ಮಹತ್ವ ಸಾರುವ ಸಂದೇಶ I ಎಸ್ ಮಧು ಬಂಗಾರಪ್ಪ I ಸೂರ್ಯಗಗನ I ದಸರಾ ಅಂಬಾರಿ ಮೆರವಣಿಗೆ ಅವಘಡ I ನಿಯಮಾನುಸಾರವೇ ಸೋಮಣ್ಣ ಆನೆಗೆ ಜವಾಬ್ದಾರಿ ನೀಡಲಾಗಿತ್ತು I ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ I ಸೂರ್ಯಗಗನ I ಮಾಂಜಾ ದಾರದಿಂದ ಅಮಾಯಕರ ಜೀವಹಾನಿ ಸಹಿಸಲಾಗದು I ಕಠಿಣ ಕಾನೂನು ಕ್ರಮಕ್ಕೆ ಸರ್ಕಾರ ಬದ್ಧ I ಉಪ ಮುಖ್ಯಮಂತ್ರಿ ಡಾ. ಜಿ. ಪರಮೇಶ್ವರ I
ಸೂರ್ಯಗಗನ

I ಜೆಸಿಐ ಶಿವಮೊಗ್ಗ ರಾಯಲ್ಸ್  I ಅ. 23ರಿಂದ ‘ಅಶ್ವಮೇಧ’ ವಲಯ ಸಮ್ಮೇಳನ I

I ಜೆಸಿಐ ಶಿವಮೊಗ್ಗ ರಾಯಲ್ಸ್  I ಅ. 23ರಿಂದ ‘ಅಶ್ವಮೇಧ’ ವಲಯ ಸಮ್ಮೇಳನ I ಶಿವಮೊಗ್ಗ:’ಜೆಸಿಐ ಇಂಡಿಯಾ ವಲಯ 24ರ ವಾರ್ಷಿಕ ಸಮ್ಮೇಳನ ‘ಅಶ್ವಮೇಧ ಜೋನ್‌ಕಾನ್–2026’ ಅ. 23 ರಿಂದ 25ರವರೆಗೆ ನಗರದ ಬಾಲರಾಜ ಅರಸ್ ರಸ್ತೆಯ ಜಿಲ್ಲಾ ಒಕ್ಕಲಿಗರ ಸಮುದಾಯ…

I ಜೆಸಿಐ ಶಿವಮೊಗ್ಗ ರಾಯಲ್ಸ್  I ಅ. 23ರಿಂದ ‘ಅಶ್ವಮೇಧ’ ವಲಯ ಸಮ್ಮೇಳನ I

ಶಿವಮೊಗ್ಗ:’ಜೆಸಿಐ ಇಂಡಿಯಾ ವಲಯ 24ರ ವಾರ್ಷಿಕ ಸಮ್ಮೇಳನ ‘ಅಶ್ವಮೇಧ ಜೋನ್‌ಕಾನ್–2026’ ಅ. 23 ರಿಂದ 25ರವರೆಗೆ ನಗರದ ಬಾಲರಾಜ ಅರಸ್ ರಸ್ತೆಯ ಜಿಲ್ಲಾ ಒಕ್ಕಲಿಗರ ಸಮುದಾಯ ಭವನದಲ್ಲಿ ನಡೆಯಲಿದೆ’ ಎಂದು ಜೆಸಿಐ ಶಿವಮೊಗ್ಗ ರಾಯಲ್ಸ್ ಘಟಕದ ಅಧ್ಯಕ್ಷೆ ಗಾನವಿ ಕೆ.ಸಿ. ತಿಳಿಸಿದರು.

ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಮ್ಮೇಳನದ ಪೂರ್ವಭಾವಿಯಾಗಿ ಅ. 23ರಂದು ಸಂಜೆ 7ಕ್ಕೆ ‘ರಾಯಲ್ಸ್ ನೈಟ್’ ಸಂಗೀತ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು.ಅ. 24ರಂದು ಬೆಳಿಗ್ಗೆ 10ಕ್ಕೆ ಸದಸ್ಯರ ಸಾಮಾನ್ಯ ಸಭೆ ನಡೆಯಲಿದೆ. ಬೆಳಿಗ್ಗೆ 11.30ಕ್ಕೆ ಮಿಮಿಕ್ರಿ ಗೋಪಿ ಅವರ ಹಾಸ್ಯ ಕಾರ್ಯಕ್ರಮವಿದ್ದು, ರಾಷ್ಟ್ರ ಭಕ್ತ ಬಳಗದ ಕೆ.ಇ. ಕಾಂತೇಶ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ಮಧ್ಯಾಹ್ನ 2ರಿಂದ ಜೆಕಾಮ್ ಸಭೆ, ಕಿರಿಯ ಜೆಸಿ ಸದಸ್ಯರ ಅಧಿವೇಶನ ಹಾಗೂ ಮಹಿಳಾ ಜೆಸಿ ಕಾರ್ಯಕ್ರಮಗಳು ನಡೆಯಲಿವೆ.

ಸಂಜೆ 4ಕ್ಕೆ ಟಿ. ಸೀನಪ್ಪ ವೃತ್ತದಿಂದ (ಗೋಪಿ ಸರ್ಕಲ್) ಜಿಲ್ಲಾ ಒಕ್ಕಲಿಗರ ಸಮುದಾಯ ಭವನದವರೆಗೆ ವಲಯಾಧ್ಯಕ್ಷರ ಮೆರವಣಿಗೆ ನಡೆಯಲಿದೆ. ಸಂಜೆ 6ಕ್ಕೆ ಸಂಸದ ಬಿ.ವೈ. ರಾಘವೇಂದ್ರ ಕಾರ್ಯಕ್ರಮ ಉದ್ಘಾಟಿಸುವರು. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಡಾ. ಆರ್.ಎಂ. ಮಂಜುನಾಥ ಗೌಡ ಹಾಗೂ ಯೂಸಫ್ ಹೈದರ್ ಗೌರವ ಅತಿಥಿಗಳಾಗಿ ಭಾಗವಹಿಸಲಿದ್ದಾರೆ. ಪ್ರೊ. ಕೃಷ್ಣೇಗೌಡ ಮುಖ್ಯ ಭಾಷಣ ಮಾಡಲಿದ್ದಾರೆ. ರಾತ್ರಿ 8.30ರಿಂದ ಪ್ರಶಸ್ತಿ ಪ್ರದಾನ ಸಮಾರಂಭ ನಡೆಯಲಿದೆ ಎಂದರು.

ವಲಯ 24ರ ಅಧ್ಯಕ್ಷ ಮಧುಸೂದನ್ ನಾವಡ, ನಿಕಟಪೂರ್ವ ವಲಯಾಧ್ಯಕ್ಷ ಗೌರೀಶ್ ಭಾರ್ಗವ್, ವಲಯ ಉಪಾಧ್ಯಕ್ಷ ಆದರ್ಶ ಸರಾಫ್, ರಾಷ್ಟ್ರೀಯ ಸಂಯೋಜಕ ಹರ್ಷವರ್ಧನ್ ರೆಡ್ಡಿ, ಮಾಜಿ ರಾಷ್ಟ್ರೀಯ ಉಪಾಧ್ಯಕ್ಷ ಅಶೋಕ್ ಭಟ್, ಜೆಎಸಿ ಅಧ್ಯಕ್ಷ ಮಹಾಬಲೇಶ್ವರ್ ಹಾಗೂ ಕಾರ್ಯಕ್ರಮದ ಅಧ್ಯಕ್ಷ ಅನಿಲ್ ಕುಮಾರ್ ಉಪಸ್ಥಿತರಿರಲಿದ್ದಾರೆ ಎಂದು ತಿಳಿಸಿದರು.

ಸದಸ್ಯರಾದ ಅನಿಲ್ ಕುಮಾರ್, ಪ್ರಮೋದ್, ರುದ್ರೇಶ್, ಗೌರೀಶ್ ಭಾರ್ಗವ್, ಗಣೇಶ್ ಪೈ, ಮೋಹನ್, ಸ್ಮಿತಾ ಹಾಗೂ ಬಸವರಾಜ್ ಇದ್ದರು.

Gara

Gara

Leave a comment

error: Content is protected !!