Monday, 23 November 2026 — Suryagagana
11:21 AM
ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I ಸಾಹಿತ್ಯ I ಪಠ್ಯಪುಸ್ತಕಗಳಿಲ್ಲದ ಓದು I ಸೂರ್ಯಗಗನ I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಸೂರ್ಯಗಗನ I ಶಿವಮೊಗ್ಗ ರಾಗಿಗುಡ್ಡದಲ್ಲಿ ಕಳಪೆ ಡ್ರೈನೇಜ್ ಕಾಮಗಾರಿ I ಕರವೇ ಕಾವಲು ಪಡೆಯಿಂದ ಪಾಲಿಕೆ ಆಯುಕ್ತರಿಗೆ ಮನವಿ I ಸೂರ್ಯಗಗನ I ಕುವೆಂಪು ವಿವಿ ಲೋಪ ಖಂಡಿಸಿ ನ. 30ರಂದು ಪ್ರತಿಭಟನೆ I ಬಿಜೆಪಿ ಯುವ ಮೋರ್ಚಾ ಅಧ್ಯಕ್ಷ ಕುಕ್ಕೆ ಪ್ರಶಾಂತ್ I ಸೂರ್ಯಗಗನ I ಬಸವಭಕ್ತರ ಧಾರ್ಮಿಕ ಭಾವನೆಗೆ ಧಕ್ಕೆ I ಕಾನೂನು ಕ್ರಮಕ್ಕೆ ಆಗ್ರಹ I ಸೂರ್ಯಗಗನ I ಪ್ರತಿ ಹನಿ ರಕ್ತವೂ ಅಮೂಲ್ಯ, ಅದು ಸದ್ಬಳಕೆಯಾಗಲಿ  I ಜಿಲ್ಲಾಧಿಕಾರಿ ಪ್ರಕಾಶ ಜಿ.ಟಿ.ನಿಟ್ಟಾಲಿ I ಗಾರಾ ಫೌಂಡೇಶನ್ I ನಮ್ಮ ಮಾರ್ನಾಮಿಬೈಲಿನ ಶಾಲೆಯ I ಹಳೆಯ ವಿದ್ಯಾರ್ಥಿಗಳು ನಮ್ಮ ಹೆಮ್ಮೆ I ಶಿಕ್ಷಕಿ ಪೈಜುನ್ನಿಸಾ I ಸೂರ್ಯಗಗನ I ಪೊಲೀಸ್ ತಂಡದ ವಿರುದ್ಧ I ಶಿವಮೊಗ್ಗ ಮಾಧ್ಯಮ ತಂಡಕ್ಕೆ ಜಯ I
ಸೂರ್ಯಗಗನ

I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I

I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನವನ್ನು…

I ರಾಯಚೂರಿನಲ್ಲಿ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನ I ಯಶಸ್ವಿಯಾಗಿ ನಡೆಸೋಣ I ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ I

ಬೆಂಗಳೂರು: ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ (KUWJ) ವತಿಯಿಂದ ರಾಯಚೂರಿನಲ್ಲಿ ನಡೆಯಲಿರುವ ಪತ್ರಕರ್ತರ 41ನೇ ರಾಜ್ಯಮಟ್ಟದ ಸಮ್ಮೇಳನವನ್ನು ಯಶಸ್ವಿಯಾಗಿ ಹಾಗೂ ಅದ್ದೂರಿಯಾಗಿ ನಡೆಸಲು ಸಂಪೂರ್ಣ ಸಹಕಾರ ನೀಡುವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಡಾ. ಅಜಯ್ ಸಿಂಗ್ ಭರವಸೆ ನೀಡಿದರು.

ಬೆಂಗಳೂರಿನ ತಮ್ಮ ನಿವಾಸದಲ್ಲಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘದ ನಿಯೋಗವನ್ನು ಭೇಟಿಯಾದ ಸಚಿವರು, ಸಮ್ಮೇಳನದ ಸಿದ್ಧತೆಗಳ ಕುರಿತು ಸುದೀರ್ಘವಾಗಿ ಚರ್ಚಿಸಿದರು.

ಈ ಸಂದರ್ಭದಲ್ಲಿ ಸಂಘದ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು ಮಾತನಾಡಿ, ಈ ಬಾರಿಯ ರಾಜ್ಯಮಟ್ಟದ ಪತ್ರಕರ್ತರ ಸಮ್ಮೇಳನ ರಾಯಚೂರಿನಲ್ಲಿ ಡಿಸೆಂಬರ್ ಕೊನೆಯ ವಾರದಲ್ಲಿ ನಡೆಯಲಿದ್ದು, ಈಗಾಗಲೇ ಅಗತ್ಯ ಸಿದ್ಧತೆಗಳನ್ನು ಆರಂಭಿಸಲಾಗಿದೆ. ಜಿಲ್ಲಾ ಉಸ್ತುವಾರಿ ಸಚಿವರ ಅಧ್ಯಕ್ಷತೆಯಲ್ಲಿ ಸ್ವಾಗತ ಸಮಿತಿ ರಚಿಸಲಾಗುವುದು. ಜಿಲ್ಲೆಯ ಎಲ್ಲ ಜನಪ್ರತಿನಿಧಿಗಳು ಸಮಿತಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ರಾಜ್ಯದ 31 ಜಿಲ್ಲೆಗಳಿಂದ ಪತ್ರಕರ್ತರು ಭಾಗವಹಿಸುವ ನಿರೀಕ್ಷೆಯಿದ್ದು, ಸಮ್ಮೇಳನದ ಯಶಸ್ಸಿಗೆ ಎಲ್ಲ ಜನಪ್ರತಿನಿಧಿಗಳ ಸಹಕಾರ ಮತ್ತು ಸಹಭಾಗಿತ್ವ ಅಗತ್ಯವಾಗಿದೆ. ಹೀಗಾಗಿ ತಾವು ಸಮ್ಮೇಳನದ ನೇತೃತ್ವ ವಹಿಸಬೇಕೆಂದು ಮನವಿ ಮಾಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಸಚಿವ ಡಾ. ಅಜಯ್ ಸಿಂಗ್, ಈ ಹಿಂದೆ ಕಲಬುರಗಿಯಲ್ಲಿ ಪತ್ರಕರ್ತರ ರಾಜ್ಯಮಟ್ಟದ ಸಮ್ಮೇಳನವನ್ನು ಅತ್ಯಂತ ಯಶಸ್ವಿಯಾಗಿ ಆಯೋಜಿಸಲಾಗಿತ್ತು. ಕಳೆದ ಬಾರಿ ಬೀದರ್‌ನಲ್ಲಿಯೂ ಉತ್ತಮ ರೀತಿಯಲ್ಲಿ ಸಮ್ಮೇಳನ ನಡೆದಿತ್ತು. ಅದೇ ಮಾದರಿಯಲ್ಲಿ ರಾಯಚೂರಿನಲ್ಲಿಯೂ ಯಾವುದೇ ಕೊರತೆಯಾಗದಂತೆ ಅದ್ದೂರಿಯಾಗಿ ಸಮ್ಮೇಳನ ಆಯೋಜಿಸುವ ಜವಾಬ್ದಾರಿಯನ್ನು ವಹಿಸಿಕೊಳ್ಳುವುದಾಗಿ ತಿಳಿಸಿದರು.

ಶೀಘ್ರದಲ್ಲೇ ರಾಯಚೂರಿಗೆ ಭೇಟಿ ನೀಡಿ, ಸಮ್ಮೇಳನದ ಯಶಸ್ಸಿಗೆ ಕೈಗೊಳ್ಳಬೇಕಾದ ಸಿದ್ಧತೆಗಳ ಕುರಿತು ಸಭೆ ನಡೆಸುವುದಾಗಿ ಭರವಸೆ ನೀಡಿದರು. ಸಮ್ಮೇಳನಕ್ಕೆ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಆಗಮಿಸುವ ಹಿನ್ನೆಲೆಯಲ್ಲಿ ಬೆಳಗಾವಿ ಅಧಿವೇಶನದ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳೊಂದಿಗೆ ಚರ್ಚಿಸಿ ಸಮ್ಮೇಳನದ ಲಾಂಛನ ಬಿಡುಗಡೆಗೆ ಕ್ರಮ ಕೈಗೊಳ್ಳುವುದಾಗಿಯೂ ತಿಳಿಸಿದರು.

ವಿಧಾನ ಪರಿಷತ್ ಸದಸ್ಯ ಎನ್.ಎಸ್. ಭೋಸರಾಜು ಮಾತನಾಡಿ, ಸಮ್ಮೇಳನಕ್ಕೆ ಆಗಮಿಸುವ ಪತ್ರಕರ್ತರಿಗೆ ಉತ್ತಮ ವಸತಿ ಹಾಗೂ ಊಟದ ವ್ಯವಸ್ಥೆ ಕಲ್ಪಿಸುವುದು ಅತ್ಯಂತ ಮುಖ್ಯ. ಈ ನಿಟ್ಟಿನಲ್ಲಿ ಅಗತ್ಯ ಸಿದ್ಧತೆಗಳನ್ನು ಈಗಿನಿಂದಲೇ ಮಾಡಿಕೊಳ್ಳಬೇಕು. ಈ ಹಿಂದೆ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿದ ಅನುಭವವಿದ್ದು, ಸಮ್ಮೇಳನದ ಯಶಸ್ಸಿಗೆ ಅಗತ್ಯ ಮಾರ್ಗದರ್ಶನ ಮತ್ತು ಸಹಕಾರ ನೀಡುವುದಾಗಿ ಹೇಳಿದರು.

ಗ್ರಾಮೀಣ ಕ್ಷೇತ್ರದ ಶಾಸಕ ಬಸನಗೌಡ ದದ್ದಲ್ ಮಾತನಾಡಿ, ಸಮ್ಮೇಳನಕ್ಕೆ ಅಗತ್ಯವಿರುವ ಎಲ್ಲ ರೀತಿಯ ಸಹಕಾರ ನೀಡುವುದಾಗಿ ಈಗಾಗಲೇ ತಿಳಿಸಿದ್ದು, ಯಾವುದೇ ಜವಾಬ್ದಾರಿ ವಹಿಸಿದರೂ ಸಮರ್ಥವಾಗಿ ನಿರ್ವಹಿಸುವುದಾಗಿ ಭರವಸೆ ನೀಡಿದರು. ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಆರ್. ಗುರುನಾಥ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಸಿದ್ದಯ್ಯ ಸ್ವಾಮಿ ಕುಕುನೂರು, ರಾಜ್ಯ ಸಮಿತಿ ಸದಸ್ಯರಾದ ಬಸವರಾಜ್ ನಾಗಡದಿನ್ನಿ, ಅರವಿಂದ್ ಕುಲಕರ್ಣಿ, ಖಜಾಂಚಿ ಮಲ್ಲಿಕಾರ್ಜುನಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.

Gara

Gara

Leave a comment

error: Content is protected !!